ಕೋವಿಡ್-19: ಸೋಂಕಿತರ ಸಂಪರ್ಕ ಪತ್ತೆ ಕಾರ್ಯ ತೀವ್ರಗೊಳಿಸಿದ ಬಿಬಿಎಂಪಿ

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಸೋಂಕಿಗೊಳಗಾಗಿ ಹೋಂ ಐಸೋಲೇಷನ್ ನಲ್ಲಿರುವವರು ಹಾಗೂ ಅವರೊಂದಿಗೆ ಸಂಪರ್ಕದಲ್ಲಿದ್ದವರ ಮೇಲೆ ಅಧಿಕಾರಿಗಳು ಕಣ್ಗಾವಲಿರಿಸಿದ್ದಾರೆಂದು ಹೇಳಿದ್ದಾರೆ. 

ಹೋಂ ಐಸೋಲೇಷನ್ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಸರ್ಕಾರ ನಿರ್ಧಾರ ತಿಳಿಸುವವರೆಗೂ ಸೋಂಕಿತರು ಹೋಂ ಐಸೋಲೇಷನ್ ನಲ್ಲಿರುವಂತೆ ನೋಡಿಕೊಳ್ಳಲಾಗುತ್ತದೆ. ಹೋಂ ಐಸೋಲೇಷನ್ ನಲ್ಲಿದ್ದವರು ಸಾವನ್ನಪ್ಪುತ್ತಿರುವ ಸಂಖ್ಯೆ ಕೂಡ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಡೆಲ್ಟಾ ಪ್ಲಸ್ ಕುರಿತು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜೀನೋಮ್ ಸೀಕ್ವೆನ್ಸಿಂಗ್'ಗೆ ಬಿಬಿಎಂಪಿ ಆದ್ಯತೆ ನೀಡಲಿದೆ. ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಎಂಬುದರ ಕುರಿತು ತಜ್ಞರು ನೀಡುವ ಶಿಫಾರಸಿನ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಪರ್ಕವನ್ನು ಪರಿಣಾಮಕಾರಿ ರೀತಿಯಲ್ಲಿ ಪತ್ತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮೂರು ಡೆಲ್ಟಾ ಪ್ಲಸ್ ವೈರಸ್ ಕೇಸ್ ಪತ್ತೆಯಾಗಿರುವ ಮೈಸೂರಿನಿಂದ ಬರುವವರಿಗೆ ಆರ್'ಟಿ-ಪಿಸಿಆರ್ ಪರೀಕ್ಷೆ ನಡೆಸುವ ಕುರಿತು ಮಾತನಾಡಿದ ಅವರು, ರ್ಯಾಂಡಮ್ ಪರೀಕ್ಷೆ ನಡೆಸಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com