ಕಾಶ್ಮೀರಿ ನಾಯಕರೊಂದಿಗೆ ಸಭೆ: ಪ್ರಧಾನಿ ಮೋದಿ ಕೊಂಡಾಡಿದ ದೇವೇಗೌಡ

ಜಮ್ಮು ಮತ್ತು ಕಾಶ್ಮೀರದ ನಾಯಕರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕೊಂಡಾಡಿದ್ದಾರೆ. 
ದೇವೇಗೌಡ
ದೇವೇಗೌಡ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ನಾಯಕರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕೊಂಡಾಡಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಪಕ್ಷದ ನಾಯಕರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಭೆ ನಡೆದಿರುವುದು ದೊಡ್ಡ ಸಾಧನೆಯಾಗಿದೆ. ಎರಡು ಪ್ರಮುಖ ವಿಚಾರಗಳ ಕುರಿತು ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಪಕ್ಷಗಳ ಮುಖಂಡರೂ ಸಂಘಟಿತ ನಿರ್ಧಾರಕ್ಕೆ ಬಂದಿರುವುದು ಮೋದಿಯವರ ದೊಡ್ಡ ಸಾಧನೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ಜನತೆ ಶಾಂತಿ, ಪ್ರಗತಿ ಹಾಗೂ ಪ್ರಜಾಪ್ರಭುತ್ವಕ್ಕೆ ಅರ್ಹರಾಗಿದ್ದು, ನನಗಂತೂ ಇದೊಂದು ಸಂತೋಷದ ಕ್ಷಣವಾಗಿದೆ ಎಂದು ಹೇಳಿದ್ದಾರೆ. 

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ದೇವೇಗೌಡ ಅವರು, ರಾಜ್ಯದ ಚುನಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರದ ನಾಯಕರ ನಡುವೆ ಉತ್ತಮವಾದ ಮಾತುಕತೆ ನಡೆದಿರುವುದು ಸಂತೋಷದ ವಿಚಾರವಾಗಿದೆ ಎಂದು ಹೇಳಿದ್ದರು. 

ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಾಕಷ್ಟು ಬಾರಿ ಭೇಟಿ ನೀಡಿದ್ದೆ. ಶಾಂತಿ ಸ್ಥಾಪನೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದೆ, ಹಲವು ವರ್ಷಗಳ ಕಾಲ ನಡೆಯದ ಚುನಾವಣೆಯನ್ನು ನಾವು ನಡೆಸಿದ್ದೆವು. ಈ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬಹುಮತದ ಮೂಲಕ ಗೆಲವು ಸಾಧಿಸಿತ್ತು. ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲಾಗಿತ್ತು ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com