ನೂತನ ಕೃಷಿ ಕಾಯ್ದೆಗೆ ವಿರೋಧ: ರಾಜಭವನದ ಮುಂದೆ ಜೂನ್ 26ಕ್ಕೆ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ರಂದಿರುವ ನೂತನ ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಭವನದ ಎದುರು ಜೂ.26ರಂದು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ರಂದಿರುವ ನೂತನ ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಭವನದ ಎದುರು ಜೂ.26ರಂದು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಹೋರಾಟದ ಸಂಚಾಲಕ ಜಿಸಿ ಬಯ್ಯಾರೆಡ್ಡಿ ಅವರು ಮಾತನಾಡಿ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿದ್ದು, ಈ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ರೈತರುಪ್ರತಿಭಟನೆಗಿಳಿದು 7 ತಿಂಗಳು ಕಳೆಯುತ್ತಿವೆ. ರೈತರು ಎಲ್ಲಾ ಕೊರೋನಾ ನಿಯಮಗಳನ್ನು ಅನುಸರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ದೆಹಲಿ ರೈತರಿಗೆ ಬೆಂಬಲ ಸೂಚಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಮೌರ್ಯ ವೃತ್ತದಲ್ಲಿ ರೈತರ ಸಂಘಟನೆಗಳು ಜೂನ್.26 ರಂದು ಪ್ರತಿಭಟನೆ ನಡೆಸಲಿದ್ದು, ಅಲ್ಲಿಂದ ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದೇವೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com