ಯೋಗೇಶ್ವರ್
ಯೋಗೇಶ್ವರ್

ಪ್ರವಾಸೋದ್ಯಮ ಕ್ಷೇತ್ರಕ್ಕೆ ಪರಿಹಾರ ಪ್ಯಾಕೇಜ್: ಶೇ.50ರಷ್ಟು ತೆರಿಗೆ ವಿನಾಯಿತಿ; ಹೋಟೆಲ್, ರೆಸಾರ್ಟ್ ವಿದ್ಯುತ್ ಬಿಲ್ ಮನ್ನಾ

ಹೋಟೆಲ್‌, ರೆಸಾರ್ಟ್‌, ರೆಸ್ಟೋರೆಂಟ್‌ ಮತ್ತು ಮನರಂಜನಾ ಪಾರ್ಕ್‌ಗಳಿಗೆ ಪ್ರಸಕ್ತ ಸಾಲಿನಲ್ಲಿ ಶೇ. 50ರಷ್ಟು ಆಸ್ತಿ ತೆರಿಗೆ ಶುಲ್ಕ ವಿನಾಯಿತಿ ಮತ್ತು ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ವಿದ್ಯುಚ್ಛಕ್ತಿ ಶುಲ್ಕ ಮನ್ನಾ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್‌ ಎರಡನೇ ಅಲೆಯಿಂದಾಗಿ ತೀವ್ರ ಸಂಕಷ್ಟಅನುಭವಿಸುತ್ತಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ನೆರವಿನ ಹಸ್ತ ಚಾಚಿದ್ದು, ಪ್ರವಾಸೋದ್ಯಮ ವಲಯಗಳಲ್ಲಿರುವ ಹೋಟೆಲ್‌, ರೆಸಾರ್ಟ್‌, ರೆಸ್ಟೋರೆಂಟ್‌ ಮತ್ತು ಮನರಂಜನಾ ಪಾರ್ಕ್ಗಳಿಗೆ ಆಸ್ತಿ ತೆರಿಗೆ, ವಿದ್ಯುತ್‌ ಶುಲ್ಕ ಹಾಗೂ ಅಬಕಾರಿ ಶುಲ್ಕದಲ್ಲಿ ಹಲವಾರು ರಿಯಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ. 

ಹೋಟೆಲ್‌, ರೆಸಾರ್ಟ್‌, ರೆಸ್ಟೋರೆಂಟ್‌ ಮತ್ತು ಮನರಂಜನಾ ಪಾರ್ಕ್‌ಗಳಿಗೆ ಪ್ರಸಕ್ತ ಸಾಲಿನಲ್ಲಿ ಶೇ. 50ರಷ್ಟುಆಸ್ತಿ ತೆರಿಗೆ ಶುಲ್ಕ ವಿನಾಯಿತಿ ಮತ್ತು ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ವಿದ್ಯುಚ್ಛಕ್ತಿ ಶುಲ್ಕ ಮನ್ನಾ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ.

ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ. 50ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ.50ರಷ್ಟು ಮೊತ್ತವನ್ನು ಈ ವರ್ಷದ ಡಿ.31 ರೊಳಗೆ ಪಾವತಿಸಲು ಆರು ತಿಂಗಳ ಕಾಲಾವ​ಕಾಶ ನೀಡಲಾಗಿದೆ. 

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ (ಗೈಡ್‌) ಐದು ಸಾವಿರ ರು. ಪರಿಹಾರವನ್ನು ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com