ರೇಖಾ ಕದಿರೇಶ್ ಹತ್ಯೆ ಆರೋಪಿಗಳಾದ ಪೀಟರ್, ಸೂರ್ಯ ಬಂಧನ: ಕಾರ್ಯಾಚರಣೆಯಲ್ಲಿ ಪೊಲೀಸರು ಯಶಸ್ವಿ

ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ರೇಖಾ ಕದಿರೇಶ್ (ಸಂಗ್ರಹ ಚಿತ್ರ)
ರೇಖಾ ಕದಿರೇಶ್ (ಸಂಗ್ರಹ ಚಿತ್ರ)

ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ನಿನ್ನೆ ಬೆಳಗ್ಗೆ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. 

ಆರೋಪಿಗಳಿಗೆ ಆರಂಭದಲ್ಲಿ ಪೊಲೀಸರು ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಪೊಲೀಸರ ಮೇಲೆ ದಾಳಿಗೆ ಮುಂದಾದರು,  ಆಗ ಅನಿವಾರ್ಯವಾಗಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದರು. ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ರವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. 

ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದರು. ಗೃಹ ಸಚಿವರು ಕೂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com