ಫೆಬ್ರವರಿಯಲ್ಲಿ ಏರ್ ಪೋರ್ಟ್ ಮುಂದೆ ಕೆಂಪೇಗೌಡ ಪ್ರತಿಮೆ ಅನಾವರಣ: ಡಿಸಿಎಂ

ನಾಡಪ್ರಭುಗಳ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭು ಕೆಂಪೇಗೌಡ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವ ಡಿಸಿಎಂ ಅಶ್ವತ್ಥ್ ನಾರಾಯಣ್.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭು ಕೆಂಪೇಗೌಡ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವ ಡಿಸಿಎಂ ಅಶ್ವತ್ಥ್ ನಾರಾಯಣ್.

ಮಾಗಡಿ: ನಾಡಪ್ರಭುಗಳ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭುಗಳ ವೀರ ಸಮಾಧಿಗೆ ಭಾನುವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ. ಹೀಗಾಗಿ ಸಮಾಧಿ ಸ್ಥಳ, ಕೆಂಪಾಪುರ ಕೆರೆ ಅಭಿವೃದ್ಧಿ ಮಾಡಲಾಗುವುದು. ನಾಡಿನ ಮತ್ತು ದೇಶದ ಸಮಸ್ತ ಜನರು ಇಲ್ಲಿಗೆ ಭೇಟಿ ನೀಡುವಂತೆ ಆಗಬೇಕು. ಕೆಂಪೇಗೌಡರ ಕಾಲದ ವೈಭವವನ್ನು ಮರುಸೃಷ್ಠಿ ಮಾಡಿ ಇಡೀ ಗ್ರಾಮವನ್ನು ಐತಿಹಾಸಿಕವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com