ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

 ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇದೇ 29 ರಿಂದ ಮಳೆ ಹೆಚ್ಚಾಗಲಿದ್ದು, ಈ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. 

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು, ಉತ್ತರ ಒಳನಾಡಿಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com