ಹೆಸರು ಬದಲಾವಣೆ ಕೈಬಿಡಿ: ಕೇರಳ ಸಿಎಂಗೆ ಎಚ್ ಡಿಕೆ ಆಗ್ರಹ

ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಗ್ರಾಮಗಳ ಹೆಸರು ಬದಲಾವಣೆಯಿಂದ ಯಾವುದೇ ಪರಿಣಾಮ ಆಗುವುದಿಲ್ಲ ಎನ್ನುವ ವಾದ ಕೇಳಿಬರುತ್ತಿದೆ.ಆದರೆ, ಕಾಸರಗೋಡು ಜಿಲ್ಲೆ ಕೇರಳದಲ್ಲಿದ್ದರೂ ಅಲ್ಲಿನ ಜನರು ಕನ್ನಡ ಮತ್ತು ಕರ್ನಾಟಕದ ಜತೆಗೆ  ದಶಕಗಳಿಂದಲೂ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಕನ್ನಡ ಮತ್ತು ಮಲಯಾಳ ಭಾಷೆಯ ಜನರು ಭಾಷಾ  ಸೌಹಾರ್ದ ಮತ್ತು ಸಾಂಸ್ಕೃತಿಕ ಸಹಬಾಳ್ವೆಗೆ ಮಾದರಿಯಾಗಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಕಾಸರಗೋಡಿನಲ್ಲಿ ಭಾಷಾ ಸೌಹಾರ್ದದ ಒಂದು ಪರಂಪರೆ ಇದೆ. ಗ್ರಾಮಗಳ ಹೆಸರುಗಳನ್ನು ಕನ್ನಡದಲ್ಲೇ ಉಳಿಸುವುದರಿಂದ ಅತ್ಯುತ್ತಮವಾದ ಪರಂಪರೆಯನ್ನು ಮುಂದುವರಿಸಿದಂತೆ ಆಗುತ್ತದೆ. ಆದ್ದರಿಂದ ಗ್ರಾಮಗಳ ಹೆಸರುಗಳ ಮಲಯಾಳೀಕರಣ ಪ್ರಯತ್ನವನ್ನು ಮುಂದುರಿಸಬಾರದು ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com