ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿ: ಯಡಿಯೂರಪ್ಪ

ಶಿಕ್ಷಣ ಸಚಿವ ಎಸ್. ಸುರೆಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಶಿಕ್ಷಣ ಸಚಿವ ಎಸ್. ಸುರೆಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಸಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿತ್ತು. ಇದೀಗ, ಈ ಬಗ್ಗೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com