ಚಾಮರಾಜನಗರ: ಕೋಳಿ ಊಟ ಸಿಗಲಿಲ್ಲ ಎಂದು ಸ್ನೇಹಿತನನ್ನೆ ಕೊಲೆ ಮಾಡಿದ್ದ ಆರೋಪಿ ಬಂಧನ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಕೋಳಿ ಊಟಕ್ಕೆ ಆಹ್ವಾನ ನೀಡಿದ್ದ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ.
Published: 30th June 2021 12:46 AM | Last Updated: 30th June 2021 12:48 AM | A+A A-

ಸಾಂದರ್ಭಿಕ ಚಿತ್ರ
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಕೋಳಿ ಊಟಕ್ಕೆ ಆಹ್ವಾನ ನೀಡಿದ್ದ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ.
ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದ ಕೃಷ್ಣನಾಯ್ಕ (55) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಇದೇ ಗ್ರಾಮದ ರಂಗಪ್ಪ ಎಂಬಾತ ಕೊಲೆ ಮಾಡಿ ತಲೆಮರೆಸಿಕೊಂಡಿದ್ದನು.
ಘಟನೆ ವಿವರ: ಮೃತ ಕೃಷ್ಣನಾಯ್ಕ ಹಾಗೂ ಆರೋಪಿ ರಂಗಪ್ಪ ಕುಚುಕು ಗೆಳೆಯರಾಗಿದ್ರು ದಿನಾ ಮದ್ಯವನ್ನು ಸೇವಿಸುತ್ತಾ ಸ್ನೇಹಾ ಗಟ್ಟಿ ಮಾಡಿಕೊಂಡಿದ್ರು. ಜೂನ್ 23ರ ರಾತ್ರಿ ಇಬ್ಬರೂ ಮದ್ಯ ಸೇವೆನೆ ಮಾಡಿಕೊಂಡು ಮನೆಗೆ ಆಗಮಿಸಿದ್ದು, ಮನೆಯಲ್ಲಿ ರಾತ್ರಿ ಊಟಕ್ಕೆ ಕೋಳಿ ಸಾಂಬಾರು ಮಾಡುವಂತೆ ಕೃಷ್ಣನಾಯ್ಕ ಪತ್ನಿಗೆ ತಿಳಿಸಿದ್ದರು.
ಈ ವೇಳೆ ಮದ್ಯದ ಅಮಲಿನಲ್ಲಿದ್ದ ಕೃಷ್ಣನಾಯ್ಕ ಹೊರಗಡೆ ಹೋಗಿ ಬರುವುದಾಗಿ ಸ್ನೇಹಿತ ರಂಗಪ್ಪನಿಗೆ ತಿಳಿಸಿ ಮತ್ತೆ ಮನೆಗೆ ವಾಪಾಸ್ಸಾದನು. ಈ ವೇಳೆ ರಂಗಪ್ಪ ಕೋಳಿ ಸಾಂಬಾರನ್ನು ಸಂಪೂರ್ಣ ತಿಂದು ಕುಳಿತ್ತಿದ್ದನು. ಇದರಿಂದ ಕುಪಿತಗೊಂಡ ಕೃಷ್ಣನಾಯ್ಕ ಹಾಗೂ ರಂಗಪ್ಪನ ನಡುವೆ ಗಲಾಟೆ ಕೈಮೀರಿತು. ಪರಿಣಾಮ ರಂಗಪ್ಪ ಕೃಷ್ಣನಾಯ್ಕನಿಗೆ ಕುಡುಗೋಲಿನಿಂದ ಕೊಲೆಗೈದು ಪರಾರಿಯಾಗಿದ್ದನು.
ಈ ಸಂಬಂಧ ರಾಮಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ವಿಶೇಷ ತಂಡವನ್ನು ರಚಿಸಿ ಕಾರ್ಯಾ ಚರಣೆ ಕೈಗೊಳ್ಳಲಾಗಿತ್ತು. ಘಟನೆಗೆ ಸಂಭಂದಿಸಿದಂತೆ ರಾಮಾಪುರ ಪೊಲೀಸರು ಆರೋಪಿಯನ್ನು ತಮಿಳುನಾಡಿನ ಹಂದಿಯೂರಿನಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸೈ ಮಂಜುನಾಥ್ ಪ್ರಸಾದ್, ಮುಖ್ಯಪೇದೆಗಳಾದ ನಿಂಗರಾಜು, ಸೈಯದ್ ಮುಸ್ತಾಕ್, ಪೇದೆಗಳಾದ ರವಿಪ್ರಸಾದ್, ಮುತ್ತುರಾಜು ಭಾಗವಹಿಸಿದ್ದರು.