ತ್ಯಾಜ್ಯ ಸಂಗ್ರಹ ಶುಲ್ಕ ವಿಧಿಸಲು ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿರುವ ಎಲ್ಲಾ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಮನೆ-ಮನೆಗೆ ತೆರಳಿ, ವಿಂಗಡಣೆ ಮಾಡಿರುವ ಕಸ ಸಂಗ್ರಹಣೆ ಮಾಡಬೇಕು ಹಾಗೂ ತ್ಯಾಜ್ಯ ಸಂಗ್ರಹಣೆಗೆ ನಿರ್ದಿಷ್ಟ ಶುಲ್ಕ ವಿಧಿಸಬೇಕು....

Published: 01st March 2021 08:39 PM  |   Last Updated: 01st March 2021 08:39 PM   |  A+A-


11-year-old boy dies after being hit by garbage truck in Bengaluru

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಬೆಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಮನೆ-ಮನೆಗೆ ತೆರಳಿ, ವಿಂಗಡಣೆ ಮಾಡಿರುವ ಕಸ ಸಂಗ್ರಹಣೆ ಮಾಡಬೇಕು ಹಾಗೂ ತ್ಯಾಜ್ಯ ಸಂಗ್ರಹಣೆಗೆ ನಿರ್ದಿಷ್ಟ ಶುಲ್ಕ ವಿಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೋಮವಾರ ಸೂಚಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ "ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ವಸ್ತುಗಳಿಂದ ತಯಾರಿಸಿದ ಗೊಬ್ಬರವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ"ಯ‌ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ ಹಾಗೂ ಪುರಸಭೆಗಳು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠ ನೀಡಿರುವ ಎಲ್ಲಾ ಆದೇಶಗಳನ್ನು ತಪ್ಪದೇ ಪಾಲಿಸುವ ಕುರಿತು ಮಾಧ್ಯಮಗಳ ಮೂಲಕ ಜಾಹೀರಾತು ನೀಡುವುದು ಸೇರಿದಂತೆ ಕರಪತ್ರಗಳನ್ನು ಹಂಚುವ ಮೂಲಕ ಕಸವಿಂಗಡಣೆ ಹಾಗೂ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp