ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಹೊಸದಾಗಿ 349 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 349 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.

Published: 01st March 2021 08:50 PM  |   Last Updated: 01st March 2021 08:50 PM   |  A+A-


Two new COVID mutations found in Maharashtra's Amravati, Yavatmal as regions brace for lockdown

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 349 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,336ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 210 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,05,847ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,33,421ಕ್ಕೆ ಏರಿಕೆಯಾಗಿದೆ. ಇನ್ನು 5824 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 118 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp