ಹಿರಿಯ ಪತ್ರಕರ್ತ ನಚ್ಚಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಕಂಬನಿ
ರಾಜ್ಯ ಕಂಡ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿದ್ದ ಎಂ.ಎನ್.ಚಕ್ರವರ್ತಿ (ನಚ್ಚಿ) ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ.
Published: 01st March 2021 01:43 PM | Last Updated: 01st March 2021 03:56 PM | A+A A-

ಎಂ.ಎನ್.ಚಕ್ರವರ್ತಿ (ನಚ್ಚಿ)
ಬೆಂಗಳೂರು: ರಾಜ್ಯ ಕಂಡ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿದ್ದ ಎಂ.ಎನ್.ಚಕ್ರವರ್ತಿ (ನಚ್ಚಿ) ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಆಂಗ್ಲ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದ ನಚ್ಚಿ, ಕನ್ನಡ ಪತ್ರಿಕೋದ್ಯಮದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದಾರೆ. ಲಂಕೇಶ್ ಪತ್ರಿಕೆಯಿಂದ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ ಅವರು, ಮಾಧ್ಯಮ ಮೌಲ್ಯಗಳಿಗೆ ಕಟ್ಟುಬಿದ್ದು ಕೆಲಸ ಮಾಡಿದ್ದಾರೆ.
ಇಂಡಿಯನ್ ಎಕ್ಸ್ಪ್ರೆಸ್, ಡೆಕ್ಕನ್ ಕ್ರಾನಿಕಲ್ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ಹೊಸ ತಲೆಮಾರಿನ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದರು.