ಯಾವುದೇ ಅಂಜಿಕೆ ಇಲ್ಲದೆ ಕೋವಿಡ್ ಲಸಿಕೆ ಪಡೆಯಿರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Published: 01st March 2021 05:55 PM  |   Last Updated: 01st March 2021 05:55 PM   |  A+A-


Get vaccinated without any hesitation; appeals Health & Medical Education Minister Dr.K.Sudhakar

ಯಾವುದೇ ಅಂಜಿಕೆ ಇಲ್ಲದೆ ಕೋವಿಡ್ ಲಸಿಕೆ ಪಡೆಯಿರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Posted By : Srinivas Rao BV
Source : Online Desk

ಶಿರಸಿ: ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಶಿರಸಿಯಲ್ಲಿ ಕೋವಿಡ್ ಲಸಿಕೆ ಅಭಿಯಾನದ ಮೂರನೇ ಹಂತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಹಂತದ ಕೋವಿಡ್ ಲಸಿಕೆ ಬೆಂಗಳೂರು, ಎರಡನೇ ಹಂತದ ಲಸಿಕೆ ಹೈದರಾಬಾದ್ ಕರ್ನಾಟಕ ಹಾಗೂ ಮೂರನೇ ಹಂತದ ಲಸಿಕೆಯನ್ನು ಶಿರಸಿಯಲ್ಲಿ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರು, ವೃದ್ಧರು, 45 ವರ್ಷ ಮೇಲ್ಪಟ್ಟ ಕೋಮಾರ್ಬಿಡಿಟಿ ಇರುವವರಿಗೆ ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು 50 ಲಕ್ಷ, ಕೋಮಾರ್ಬಿಡಿಟಿ ಹೊಂದಿರುವ 16 ಲಕ್ಷ ಜನರಿದ್ದಾರೆ ಎಂದು ಅಂದಾಜಿಸಲಾಗಿದೆ. ಇಂತಹವರಿಗೆ ಲಸಿಕೆ ನೀಡದೇ ಇದ್ದಲ್ಲಿ, ಅವರಿಗೆ ವ್ಯಾಧಿ ತೀವ್ರವಾಗಿ ಸಾವು ಉಂಟಾಗಬಹುದು. ಎಲ್ಲರಿಗೂ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಏಮ್ಸ್ ಗೆ ಹೋಗಿ ಲಸಿಕೆ ಪಡೆದಿದ್ದಾರೆ. ಪ್ರಧಾನಿಗಳೇ ಲಸಿಕೆ ಪಡೆದ ಬಳಿಕ ಯಾರೂ ಅಂಜಬೇಕಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಪ್ರಕಟಿಸುವವರು ಇದ್ದಾರೆ. ಜನರು ಸರ್ಕಾರ ಪ್ರಕಟಿಸುವ ಮಾಹಿತಿಯನ್ನು ಮಾತ್ರ ನೋಡಿ ಅದನ್ನು ಪಾಲಿಸಬೇಕು. ಲಸಿಕೆ ಪಡೆದ ಬಳಿಕ ಕೋವಿಡ್ ಸೋಂಕು ಬಂದರೆ ಅಂತಹವರಿಗೆ ಹೆಚ್ಚು ಸಮಸ್ಯೆ ಉಂಟಾಗುವುದಿಲ್ಲ. ಶಿಸ್ತಿನ ಜೀವನ, ಉತ್ತಮ ಆಹಾರದಿಂದ ಆರೋಗ್ಯವಾಗಿರಬಹುದು. ಇದರಿಂದಾಗಿ ಆರ್ಥಿಕ ಪ್ರಗತಿ, ಶೈಕ್ಷಣಿಕ ಪ್ರಗತಿ ಉಂಟಾಗುತ್ತದೆ. ಆರೋಗ್ಯವೇ ಇಲ್ಲದಿದ್ದರೆ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ರಾಷ್ಟ್ರೀಯ ಆರ್ಥಿಕ ಸಂಸ್ಥೆಯವರು ಬಿಡುಗಡೆ ಮಾಡಿದ ವರದಿಯಲ್ಲಿ, ಪ್ರತಿ ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ 8% ಹಣ ಮೀಸಲಿಡಬೇಕು ಎಂದು ಸಲಹೆ ನೀಡಿದ್ದಾರೆ. ಮಾನವ ಸಂಪನ್ಮೂಲ ಕೂಡ ಹೆಚ್ಚಿಸಬೇಕು ಎನ್ನಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ನೀಗಿಸಲು 2,150 ವೈದ್ಯರ ನೇರ ನೇಮಕ ಮಾಡಲಾಗುತ್ತಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಬೇಗನೆ ಬಡ್ತಿ ಮೊದಲಾದ ವಿಶೇಷ ಸೌಲಭ್ಯ ನೀಡುವ ಬಗ್ಗೆ ಚಿಂತನೆ ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ 24 ಗಂಟೆ ಸೇವೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp