ಮೊದಲನೇ ಕೋವಿಡ್ ಲಸಿಕೆ ಪಡೆದ ಸಚಿವ ಜಗದೀಶ್ ಶೆಟ್ಟರ್

ಕೊರೋನಾ ಲಸಿಕೆ ಅಭಿಯಾನದ ಎರಡನೇ ಹಂತ ಇಂದಿನಿಂದ ಪ್ರಾರಂಭವಾಗಿದ್ದು ಈ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಕೂಡ ಲಸಿಕೆ ಪಡೆದುಕೊಂಡಿದ್ದಾರೆ.

Published: 01st March 2021 04:17 PM  |   Last Updated: 01st March 2021 04:17 PM   |  A+A-


ಕೋವಿಡ್ ಲಸಿಕೆ ಪಡೆದ ಜಗದೀಶ್ ಶೆಟ್ಟರ್

Posted By : Raghavendra Adiga
Source : Online Desk

ಹುಬ್ಬಳ್ಳಿ: ಕೊರೋನಾ ಲಸಿಕೆ ಅಭಿಯಾನದ ಎರಡನೇ ಹಂತ ಇಂದಿನಿಂದ ಪ್ರಾರಂಭವಾಗಿದ್ದು ಈ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಕೂಡ ಲಸಿಕೆ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಶೆಟ್ಟರ್ ಲಸಿಕೆ ಪಡೆದುಕೊಂಡಿದ್ದಾರೆ. ಅದೇ ವೇಳೆ ಅರ್ಹರಾಗಿರುವ ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು

ತಾವು ಕೊರೋನಾ ಲಸಿಕೆ ಪಡೆದುಕೊಂಡಿರುವ ಬಗ್ಗೆ ಟ್ವೀಟ್ ಮಾಡಿರುವ ಶೆಟ್ಟರ್ "ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ - 19 ನ ಮೊದಲ ಹಂತದ ಲಸಿಕೆಯನ್ನು ಪಡೆಯಲಾಯಿತು. 

"ಇದು ಸಂಪೂರ್ಣ ಸುರಕ್ಷಿತವಾಗಿದ್ದು, ಅರ್ಹರಿರುವ ಎಲ್ಲರೂ ಯಾವುದೇ ಭಯ - ಆತಂಕವಿಲ್ಲದೆ ಲಸಿಕೆ ಪಡೆಯಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. " ಎಂದು ಬರೆದುಕೊಂಡಿದ್ದಾರೆ.

ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು,  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿ ಹಲವರು ಮೊದಲ ಹಂತದ ಲಸಿಕೆ ಪಡೆದಿದ್ದಾರೆ.


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp