ಸಹಕಾರಿ ಸಾಲ ವಿತರಣೆಯಲ್ಲಿ ಇಲಾಖೆ ಶೇ.90 ರಷ್ಟು ಪ್ರಗತಿ: ಸಚಿವ ಎಸ್.ಟಿ. ಸೋಮಶೇಖರ್

ಸಹಕಾರ ಸಂಘಗಳ ಮೂಲಕ 3 ಲಕ್ಷ ರೂ. ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.10 ಲಕ್ಷಗಳ ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ...

Published: 02nd March 2021 04:19 PM  |   Last Updated: 02nd March 2021 06:12 PM   |  A+A-


Cooperation Minister S T Somashekar

ಸಚಿವ ಸೋಮಶೇಖರ್

Posted By : Lingaraj Badiger
Source : UNI

ಬೆಂಗಳೂರು: ಸಹಕಾರ ಸಂಘಗಳ ಮೂಲಕ 3 ಲಕ್ಷ ರೂ. ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.10 ಲಕ್ಷಗಳ ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್. ಟಿ ಸೋಮಶೇಖರ್ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ ರೂ.14500 ಕೋಟಿ ಅಲ್ಪಾವಧಿ ಬೆಳ ಸಾಲ ಮತ್ತು. 70 ಲಕ್ಷ ರೈತರಿಗೆ 1200 ಕೋಟಿ ಮಧ್ಯಮಾವಧಿ, ದೀರ್ಘಾವಧಿ ಸಾಲ ವಿತರಣೆ ಗುರಿ ಹೊಂದಲಾಗಿದೆ ಎಂದರು.

25-02-2021 ರವರೆಗೆ ಒಟ್ಟು 21.64 ಲಕ್ಷ ರೈತರಿಗೆ ರೂ.14179.22 ಕೋಟಿಗಳ ಅಲ್ಪಾವಧಿ ಕೃಷಿ ಸಾಲ ಮತ್ತು 0.36 ಲಕ್ಷ ರೈತರಿಗೆ ರೂ.800.51 ಕೋಟಿಗಳ ಮಧ್ಯಮಾವಧಿ- ದೀರ್ಘಾವಧಿ ಸಾಲ ವಿತರಿಸಿ ಶೇ.90.56 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಪಶುಸಂಗೋಪನೆಗೆ ದುಡಿಯುವ ಬಂಡವಾಳ ಮತ್ತು ಮೀನುಗಾರರಿಗೆ ದುಡಿಯುವ ಬಂಡವಾಳಕ್ಕಾಗಿ ಸಾಲ ವಿತರಣೆ ಮಾಡಲಾಗಿದೆ. ಈ ಯೋಜನೆಯಡಿ ಹಾಲು ಉತ್ಪಾದಕ ಸಹಕಾರ ಸಂಘಗಳು ಹಾಲು ಪೂರೈಕೆ ಮಾಡುತ್ತಿರುವ ರೈತರಿಂದ ಸಾಲದ ಅರ್ಜಿಗಳನ್ನು ಪಡೆದು ಸಂಬಂಧಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಲ್ಲಿಸಿ ಗರಿಷ್ಠ 2 ಲಕ್ಷ ರೂ ಗಳ ವರೆಗಿನ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ಪಡೆಯಬಹುದಾಗಿದೆ.

ಮೀನುಗಾರಿಕೆ ಸಹಕಾರ ಸಂಘಗಳೂ ಸಹ ಸಾಲ ಪಡೆಯಬಹುದಾಗಿದೆ. 2020-21 ನೇ ಸಾಲಿನಲ್ಲಿ 38825 ರೈತರಿಗೆ ರೂ.100,00 ಕೋಟಿಗಳ ಸಾಲ ವಿತರಿಸಲು ಗುರಿ ನಿಗದಿಪಡಿಸಲಾಗಿದೆ.

ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ರಾಜ್ಯದಲ್ಲಿ ಇಲ್ಲಿಯವರೆಗೆ ಸಹಕಾರ ಕ್ಷೇತ್ರದಲ್ಲಿ 2.5 ಲಕ್ಷ ಸ್ತ್ರೀಶಕ್ತಿ/ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಡಿಸಿಸಿ ಬ್ಯಾಂಕು/ಪ್ಯಾಕ್ಸ್ಗಳ ಮೂಲಕ ಮಹಿಳಾ ಗುಂಪುಗಳಿಗೆ ರೂ.5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಪುರುಷ ಗುಂಪುಗಳಿಗೆ ಶೇಕಡಾ 4ರ ಬಡ್ಡಿದರದಲ್ಲಿ ಸಾಲ ವಿತರಿಸಲಾಗುತ್ತಿದೆ ಎಂದೂ ಸಚಿವರು ಹೇಳಿದರು.

2020-21 ನೇ ಸಾಲಿನಲ್ಲಿ 38825 ರೈತರಿಗೆ ರೂ.100,00 ಕೋಟಿಗಳ ಸಾಲ ವಿತರಿಸಲು ಗುರಿ ನಿಗದಿಪಡಿಸಲಾಗಿದೆ. ತಹಲ್ ವರೆಗೆ 57185 ರೈತರಿಗೆ ರೂ.106.00 ಕೋಟಿಗಳ ಸಾಲ ವಿತರಿಸಲಾಗಿದ್ದು, ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ.ಮೀನುಗಾರಿಕಾ ರೈತರಿಗೆ ತಹಲ್ ವರೆಗೆ 116 ಜನರಿಗೆ ವಿತರಿಸಲಾಗಿದೆ. 0.59 ಟಿ ಸಾಲ ವಿತರಿಸಲಾಗಿದೆ.

ಇನ್ನು ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ರಾಜ್ಯದಲ್ಲಿ ಇಲ್ಲಿಯವರೆಗೆ ಸಹಕಾರ ಕ್ಷೇತ್ರದಲ್ಲಿ 2.5 ಲಕ್ಷ ಸ್ತ್ರೀಶಕ್ತಿ/ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಡಿಸಿಸಿ ಬ್ಯಾಂಕು, ಪ್ಯಾಕ್ಸ್‌ಗಳ ಮೂಲಕ ಮಹಿಳಾ ಗುಂಪುಗಳಿಗೆ ರೂ.5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಪುರುಷ ಗುಂಪುಗಳಿಗೆ ಶೇಕಡಾ 4ರ ಬಡ್ಡಿದರದಲ್ಲಿ ಸಾಲ ವಿತರಿಸಲಾಗುತ್ತಿದೆ. 2020-21ನೇ ಸಾಲಿನಲ್ಲಿ 0.36 ಲಕ್ಷ ಗುಂಪುಗಳಿಗೆ ರೂ.1200 ಕೋಟಿಗಳ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ಜನವರಿ ಅಂತ್ಯಕ್ಕೆ 0.21 ಲಕ್ಷ ಗುಂಪುಗಳಿಗೆ ರೂ.754.39 ಕೋಟಿ ಸಾಲ ವಿತರಿಸಲಾಗಿದೆ.ಶೇ.62.86 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
 
ಬಡವರ ಬಂಧು ಯೋಜನೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರಾಜ್ಯದ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳನ್ನು ಲೇವಾದೇವಿಗಾರರಿಂದ ಮುಕ್ತಿಗೊಳಿಸಿ ರಾಜ್ಯದ ಡಿಸಿಸಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕುಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ರೂ.10,000 ಗಳ ಮಿತಿಯಲ್ಲಿ ಸಾಲ ವಿತರಿಸಲಾಗುತ್ತಿದ್ದು, 2020-21ನೇ ಸಾಲಿನಲ್ಲಿ 25 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
 
'ಕಾಯಕ' ಯೋಜನೆಯಲ್ಲಿ ಸ್ವ ಸಹಾಯ ಗುಂಪುಗಳಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆಯನ್ನು ವೃದ್ಧಿಗೊಳಿಸಲು ಮತ್ತು ಸ್ವ-ಉದ್ಯೋಗವನ್ನು ಪ್ರೋತ್ಸಾಹಿಸಲಾಗಿದೆ.ಆದಾಯವನ್ನು ಹೆಚ್ಚಿಸಲು ಸಹಕಾರ ಸಂಸ್ಥೆಗಳ ಮೂಲಕ ಪ್ರತಿ ಗುಂಪಿಗೆ ಶೂನ್ಯ ಬಡ್ಡಿದರದಲ್ಲಿ ಗರಿಷ್ಟ ರೂ.5 ಲಕ್ಷಗಳವರೆಗೆ ಹಾಗೂ ಶೇ. 4 ರದರದಲ್ಲಿ ರೂ. 10 ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ.2020-21 ನೇ ಸಾಲಿನಲ್ಲಿ 2500 ಸ್ವಸಹಾಯ ಗುಂಪುಗಳಿಗೆ ಸಾಲ ವಿತರಿಸಲು ಗುರಿ ಹೊಂದಲಾಗಿದೆ.7 ತಹಲ್‌ ವರಗೆ 245 ಗುಂಪುಗಳಿಗೆ ರೂ. 10,81 ಕೋಟಿಗಳ ಸಾಲ ವಿತರಿಸಲಾಗಿದೆ.ಕೇಂದ್ರ ಸರ್ಕಾರದ ಆತ್ಮನಿರ್ಭರ್ ಯೋಜನೆಯಯಲ್ಲೂ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಯೋಜನೆಯಲ್ಲಿ ರೈತರ ಜಮೀನುಗಳಿಗೆ ಕೊಯ್ದು ನಂತರದ ಮೂಲಭೂತ ಸೌಕರ್ಯವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ರೈತ/ಉತ್ಪಾದಕ ಸಂಸ್ಥೆಗಳು, ಅಗ್ರಿ ಎಂಟರ್ ಪ್ರೈಸಸ್ ಗಳ ಮೂಲಕ ಒದಗಿಸಲು ಉದ್ದೇಶಿಸಲಾಗಿದೆ.
 
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಉಪಯೋಗಿ ಸೇವಾ ಕೇಂದ್ರಗಳಾಗಿ ಪರಿವರ್ತಿಸಲು ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಕೇಂದ್ರ ಸರ್ಕಾರವು ಗರಿಷ್ಟ 7 ವರ್ಷಗಳ ಅವಧಿಗೆ ಶೇ.3 ರ ಬಡ್ಡಿದರದಲ್ಲಿ ಮಂಜೂರು ಮಾಡುತ್ತದೆ. ಈ ಸಾಲಕ್ಕೆ ಕೇಂದ್ರ ಸರ್ಕಾರದಿಂದ ಶೇ.3 ರ ಬಡ್ಡಿ ಸಹಾಯಧನ ಲಭಿಸುತ್ತದೆ,ಇದರಿಂದ ಸಂಘಗಳಿಗೆ ಶೇ.1 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕಿದಂತಾಗುತ್ತದೆ.2020-21 ನೇ ಸಾಲಿಗೆ ಸಹಕಾರ ಇಲಾಖೆಯಿಂದ 1000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಯೋಜನೆ ಲಾಭ ಪಡೆಯಲು ಗುರಿ ಹೊಂದಲಾಗಿದೆ.ಇದುವರೆಗೆ 949 ಪ್ಯಾಕ್ಸ್‌ಗಳು ರೂ.355.84 ಕೋಟಿಗಳ ಸಾಲಕ್ಕೆ ಅರ್ಜಿ ಸಲ್ಲಿಸಿದ್ದು, ನಬಾರ್ಡ್ 614 ಸಂಘಗಳಿಗೆ ರೂ.198.24 ಕೋಟಿಗಳ ಸಾಲವನ್ನು ಮಂಜೂರು ಮಾಡಲಾಗಿದೆ.ಈ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ ಎಂದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp