ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ- ಡಿಸಿಪಿ ಅನುಚೇತ್
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬರ ಜೊತೆಗೆ ನಡೆಸಿದಾರೆ ಎನ್ನಲಾದ ರಾಸಲೀಲೆ ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
Published: 02nd March 2021 09:16 PM | Last Updated: 03rd March 2021 07:45 PM | A+A A-

ಡಿಸಿಪಿ ಅನುಚೇತ್
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬರ ಜೊತೆಗೆ ನಡೆಸಿದಾರೆ ಎನ್ನಲಾದ ರಾಸಲೀಲೆ ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ಬಗ್ಗೆ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ನೀಡಿರುವ ದೂರು ಕುರಿತಂತೆ ಪ್ರತಿಕ್ರಿಯಿಸಿರುವ ಡಿಸಿಪಿ, ಸಚಿವರು ಮಹಿಳೆಗೆ ಬೆದರಿಕೆಯೊಡ್ಡಿದ್ದಾರೆ. ಆ ಬಗ್ಗೆ ಸಂತ್ರಸ್ತೆ ಹಾಗೂ ಕುಟುಂಬಸ್ಥರು ತನಗೆ ತಿಳಿಸಿರುವುದಾಗಿ ದೂರುದಾರ ದಿನೇಶ್ ಹೇಳಿದ್ದಾರೆ.ಅವರಿಂದ ಮತ್ತಷ್ಟು ಮಾಹಿತಿ ಪಡೆಯಬೇಕಾಗಿದೆ ಎಂದರು.
ಸಂತ್ರಸ್ತೆ ಹಾಗೂ ಕುಟುಂಬದವರನ್ನು ನಾವೇ ಸಂಪರ್ಕಿಸಿ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.