ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ; ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರೊಟೆಸ್ಟ್

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಾರಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು

Published: 02nd March 2021 02:05 PM  |   Last Updated: 02nd March 2021 03:21 PM   |  A+A-


representationaal image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಾರಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇದರ ಜೊತೆಗೆ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕ ಕೂಡ ಪ್ರೊಟೆಸ್ಟ್ ನಡೆಸಿತು.

ಈ ಬಾರಿಯ ಬಜೆಟ್ ನಲ್ಲಿ ಸಾರಿಗೆ ನೌಕರರ 6ನೇ ವೇತನ ಆಯೋಗ ಜಾರಿಯಾಗಬೇಕು ಎನ್ನುವ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನೌಕರರು ಮೌರ್ಯ ವೃತ್ತದಲ್ಲಿ ಒಂದು ದಿನದ ಉಪವಾಸ ಕೈಗೊಂಡಿದ್ದಾರೆ.  ಬಸ್ ಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಇಲ್ಲ, ಇಂದಿನ ಪ್ರತಿಭಟನೆಯಲ್ಲಿ ಎಲ್ಲಾ ನಿಗಮದ ನೌಕರರು ಭಾಗಿಯಾಗಲಿದ್ದಾರೆ. ಆದರೆ ವಾರದ ರಜೆ ಇರುವ ನೌಕರರು ಮಾತ್ರ ಹೋರಾಟದಲ್ಲಿ ಭಾಗಿಯಾಗಲು ಸಾರಿಗೆ ನಿಗಮಗಳ ನೌಕರರ ಸಂಘಗಳು ಸೂಚಿಸಿವೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು, ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು, ಎಲ್ ಕೆ.ಜಿ ಯುಕೆಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು ಎನ್ನುವ ಕೆಲವು ಬೇಡಿಕೆಗಳನ್ನು ಮುಂದಿಡಲಾಗಿದೆ. 

ದಿನೇದಿನೇ ಹೆಚ್ಚುತ್ತಿರುವ ತೈಲ,ಇಂಧನ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೆಜೆಸ್ಟಿಕ್ ಬಳಿಕಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿಯ ವೃತ್ತದಿಂದ ಮೌರ್ಯ ವೃತ್ತದ ಬಳಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಿಳಾ ಕಾರ್ಯಕರ್ತರು ಸಿಲಿಂಡರ್ ಹೊತ್ತು,ತರಕಾರಿಮಾಲೆ ಸರ ಧರಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾಅಮರನಾಥ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಗ್ಯಾಸ್ ಬೆಲೆಯನ್ನ ಏರಿಕೆ ಮಾಡಿರುವುದರಿಂದ ತರಕಾರಿ, ಧಾನ್ಯಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬದುಕು ನಡೆಸಲು ಕಷ್ಟವಾಗಿದೆ. ಬಿಜೆಪಿ ನೀಡಿದ ಯಾವುದೇ ಭರವಸೆಯನ್ನೂ ಇದುವರೆಗೂ ಈಡೇರಿಸಿಲ್ಲ. ಜನರಿಗೆ ನೀಡಿದ ಭರವಸೆಯನ್ನು ಬಿಜೆಪಿ ಮೊದಲು ಈಡೇರಿಸಲಿ ಜನಸಾಮಾನ್ಯರ ಸಂಕಷ್ಟ ಪರಿಹರಿಸಲಿ ಎಂದು ಆಗ್ರಹಿಸಿದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp