ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ ದಿನೇಶ್ ಕಲ್ಲಹಳ್ಳಿ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published: 02nd March 2021 07:35 PM  |   Last Updated: 03rd March 2021 02:09 PM   |  A+A-


Posted By : Vishwanath S
Source : UNI

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರುಚಿತ್ರ ನಿರ್ಮಿಸಲು ಬಂದ ಆರ್.ಟಿ ನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕದ ಯುವತಿಯೊಬ್ಬರಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನಂತರ ಉದ್ಯೋಗವೂ ನೀಡದೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಇನ್ನು ಯುವತಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿದಾಗ, ಆಕೆಗೆ ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಪ್ರಕರಣದ ತನಿಖೆ ನಡೆಸಿ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸಂತ್ರಸ್ತೆ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಯುಕ್ತರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡಿದ್ದೇವೆ. ನಮ್ಮ ದೂರನ್ನು ಪರಿಶೀಲಿಸಿದ ಆಯುಕ್ತರು ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆಗೆ ರವಾನಿಸಿದ್ದಾರೆ. ಅಲ್ಲಿ ಮತ್ತೆ ದೂರು ನೀಡಲಿದ್ದೇನೆ ಎಂದರು.

800

ಇದೊಂದು ಸೂಕ್ಷ್ಮ ವಿಚಾರ ಯುವತಿಯ ವಿವರ ಬಹಿರಂಗ ಮಾಡಲು‌ ಸಾಧ್ಯವಿಲ್ಲ‌. ಅವರ ಕುಟುಂಬ ಸದಸ್ಯರು ನನ್ನನ್ನು ಸಂಪರ್ಕಿಸಿ, ನನ್ನ ನೆರವು ಕೋರಿದ್ದಾರೆ. ಅವರ ಕುಟುಂಬ ಸದಸ್ಯರು ಸೋಮವಾರ ಸಿಡಿ ನೀಡಿದ್ದಾರೆ. ಸರ್ಕಾರಿ ಉದ್ಯೋಗ‌ ಕೊಡಿಸುವುದಾಗಿ ಹೇಳಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಆದ್ದರಿಂದ ನ್ಯಾಯ ಒದಗಿಸಿ ಕೊಡಿ ಎಂದು ಕೇಳಿದ್ದರು. ನಮ್ಮ ವಕೀಲರೊಂದಿಗೆ ಚರ್ಚಿಸಿ ಸಿಡಿ, ದಾಖಲೆ ಇರಿಸಿಕೊಂಡಿದ್ದೇನೆ. ಈ ಕುರಿತು ತನಿಖೆಯಾಗಲಿ ಸತ್ಯಾಸತ್ಯತೆ ಹೊರಬರಲಿ ಎಂದು ದೂರು ನೀಡಿದ್ದೇನೆ ಎಂದರು.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp