ಮಂಗಳೂರು ವಿಮಾನ ನಿಲ್ದಾಣದಲ್ಲಿ 16.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನ ವಶ, ಓರ್ವನ ಬಂಧನ

ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Published: 02nd March 2021 12:14 PM  |   Last Updated: 02nd March 2021 01:00 PM   |  A+A-


ಟ್ರಾಲಿ ಬ್ಯಾಗ್ ‌ಗಳಲ್ಲಿ ಚಿನ್ನದ ಕಳ್ಳಸಾಗಣೆ

Posted By : Raghavendra Adiga
Source : Online Desk

ಮಂಗಳುರು: ಮಾರ್ಚ್ 2 ರ ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಟ್ರಾಲಿ ಬ್ಯಾಗ್ ‌ಗಳಲ್ಲಿ ಮುಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ 350 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧ ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ.

ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ 16,52,000 ರೂ. ಎಂದು ಹೇಳಲಾಗಿದೆ. ಉಪ ಆಯುಕ್ತ ಡಾ.ಕಪಿಲ್ ಗಡೆ ಐಆರ್ಎಸ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಅಧಿಕಾರಿಗಳಾದ ನಾಗೇಶ್ ಕುಮಾರ್, ಅಧೀಕ್ಷಕರು, ಸುಬೇಂದು ಬೆಹ್ರಾ ಮತ್ತು ನವೀನ್ ತಂಡದಲ್ಲಿದ್ದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp