ಕೃಷಿ ಸಚಿವರ ದರ್ಬಾರ್: ಮನೆಗೆ ತರಿಸಿಕೊಂಡು ಕೊರೋನಾ ಲಸಿಕೆ ಹಾಕಿಸಿಕೊಂಡ ಬಿ.ಸಿ. ಪಾಟೀಲ್

ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ.  ಪಾಟೀಲ್ ಪತ್ನಿ ಕೂಡ ಮನೆಯಲ್ಲಿಯೇ ಲಸಿಕೆ ಪಡೆದುಕೊಂಡಿದ್ದಾರೆ

Published: 02nd March 2021 01:03 PM  |   Last Updated: 02nd March 2021 01:43 PM   |  A+A-


Minister bc patil has taken Covid 19 vaccination

ಲಸಿಕೆ ಪಡೆದುಕೊಂಡ ಬಿಸಿ ಪಾಟೀಲ್

Posted By : Shilpa D
Source : Online Desk

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ಲಸಿಕೆ ಪಡೆಯುವ ಮೂಲಕ ಜನ ಸಾಮಾನ್ಯರಲ್ಲಿನ ಅನಗತ್ಯ ಭಯ ಹಾಗೂ ತಪ್ಪು ಅಭಿಪ್ರಾಯವನ್ನು ಹೋಗಲಾಡಿಸಲು ಪ್ರಯತ್ನಿಸಿದ್ದಾರೆ. ಆ ಮೂಲಕ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ.

ಈ ಮಧ್ಯೆ ಬಿಜೆಪಿ, ತನ್ನ ಸಂಸದರು, ಸಚಿವರು ಹಾಗೂ ಶಾಸಕರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿಯೂ ಬಿಜೆಪಿ ಸಚಿವರು, ಶಾಸಕರು ಒಬ್ಬೊಬ್ಬರಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ.  ಪಾಟೀಲ್ ಪತ್ನಿ ಕೂಡ ಮನೆಯಲ್ಲಿಯೇ ಲಸಿಕೆ ಪಡೆದುಕೊಂಡಿದ್ದಾರೆ.

ಮನೆಯಲ್ಲಿಯೇ ಕೂತು ಸಚಿವರು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಆತಂಕದ ಸಮಯದಲ್ಲಿ ರಾಜ್ಯ ಹಾಗೂ ಹಾಗೂ ಕೇಂದ್ರ ಸರ್ಕಾರಗಳು ಜನರೊಂದಿಗೆ ನಿಂತು, ಅವರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿವೆ. ಲಸಿಕೆ ಪಡೆದ ಬಳಿಕ ವೈದ್ಯರು ಸೂಚಿಸುವ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ಭಯವಿಲ್ಲದೆ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವ ಪಾಟೀಲ್ ಇದೇ ಸಂದರ್ಭದಲ್ಲಿ ಜನರಲ್ಲಿ ಮನವಿ ಮಾಡಿದ್ದಾರೆ.

ಮನೆಗೆ ವೈದ್ಯರನ್ನು ಕರೆಸಿಕೊಂಡು ಲಸಿಕೆ ಹಾಕಿಸಿಕೊಂಡ ಸಂಬಂಧ  ಸ್ಪಷ್ಟನೆ ನೀಡಿರುವ ಸಚಿವ ಬಿ.ಸಿ ಪಾಟೀಲ್, ಮಾರ್ಗಸೂಚಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ.ನಿನ್ನೆ ತಡವಾಗಿ ಮನೆಗೆ ಬಂದೆ. ಬೆಳಿಗ್ಗೆ ಜನರು ಮನೆ ಬಳಿ ಬಂದಿದ್ದಾರೆ. ಹೀಗಾಗಿ ಮನೆಗೆ ವೈದ್ಯರನ್ನ ಕರೆಸಿ ಲಸಿಕೆ ಹಾಕಿಸಿಕೊಂಡೆ. ಆದರೆ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂಬ ವಿಚಾರ ಗೊತ್ತಿಲ್ಲ. ವಿಚಾರ ಗೊತ್ತಿದ್ದರೇ ಆಸ್ಪತ್ರೆಗೆ ಹೋಗುತ್ತಿದ್ದೆ ಎಂದು ವಿವರಣೆ ನೀಡಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp