ರೈತರ ಮೇಲಿನ ಟ್ವೀಟ್‌ ಸಂಬಂಧ ಎಫ್‌ಐಆರ್: ಕಂಗನಾ ರನೌತ್ ಅರ್ಜಿ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್!

ಬಾಲಿವುಡ್ ನಟಿ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ.

Published: 02nd March 2021 04:17 PM  |   Last Updated: 02nd March 2021 04:17 PM   |  A+A-


Kangana Ranaut

ಕಂಗನಾ ರಣಾವತ್

Posted By : Vishwanath S
Source : The New Indian Express

ಬೆಂಗಳೂರು: ಬಾಲಿವುಡ್ ನಟಿ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ. 

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ವಿಚಾರಣೆಯನ್ನು ಮಂಗಳವಾರ ಮುಂದೂಡಿದ್ದಾರೆ.

ತುಮಕೂರು ಮೂಲದ ವಕೀಲ ರಮೇಶ್ ನಾಯಕ್ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ಹೊರಡಿಸಿದ ಆದೇಶ ಸಂಬಂಧ ತುಮಕೂರು ಜಿಲ್ಲೆಯ ಕ್ಯತ್ಸಂದ್ರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕಂಗನಾ ರನೌತ್ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ನಾಯಕ್ ಕಂಗನಾ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಜೆಎಂಎಫ್‌ಸಿ ಸ್ಥಳೀಯ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp