ರಾಸಲೀಲೆ ಸಿಡಿ ರಿಲೀಸ್ ಆಗುತ್ತಿದ್ದಂತೆ ಅಜ್ಞಾತರಾದ ರಮೇಶ್ ಜಾರಕಿಹೊಳಿ, ಹೋಗಿದ್ದೆಲ್ಲಿಗೆ?

ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಸಿಡಿ ರಿಲೀಸ್ ಆಗುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

Published: 02nd March 2021 06:42 PM  |   Last Updated: 02nd March 2021 07:41 PM   |  A+A-


Ramesh Jarkiholi

ರಮೇಶ್ ಜಾರಕಿಹೊಳಿ

Posted By : Vishwanath S
Source : Online Desk

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಸಿಡಿ ರಿಲೀಸ್ ಆಗುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 

ರಮೇಶ್ ಜಾರಕಿಹೊಳಿ ಒಂಟಿಯಾಗಿ ಅಜ್ಞಾನ ಸ್ಥಳಕ್ಕೆ ತೆರಳಿದ್ದಾರೆ. ಬಿಜೆಪಿಯ ಆಪ್ತರ ಮದುವೆ ಸಂಬಂಧ ಮೈಸೂರಿಗೆ ಆಗಮಿಸಿದ್ದರು. ಇನ್ನು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಸಚಿವರು ಪಡೆದಿದ್ದರು.

ಇದೀಗ ಸಿಡಿ ಬಿಡುಗಡೆಯಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಚಿವ ರಮೇಶ್ ಜಾರಕಿಹೊಳಿಯವರು ಎಸ್ಕಾರ್ಟ್ ಬಿಟ್ಟು ಒಬ್ಬಂಟಿಯಾಗಿ ಅಜ್ಞಾನ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ರಮೇಶ್ ಜಾರಕಿಹೊಳಿಯವರು ಯುವತಿಯನ್ನು ಬಳಸಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿ ದೂರು ನೀಡಿದ್ದಾರೆ. 

ದೆಹಲಿಯ ಕರ್ನಾಟಕ ಭವನದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದು ಸರ್ಕಾರಿ ಐಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp