ಸ್ಥಳದಲ್ಲೇ ಲಸಿಕೆ ನೋಂದಣಿಗೆ ಶೀಘ್ರದಲ್ಲೇ ಅವಕಾಶ: ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ

ಮಾ.1ರಿಂದ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿಗೆ ತುತ್ತಾದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನೀಡುವ ಅಭಿಯಾನ ಆರಂಭವಾಗಿದ್ದು, ಲಸಿಕೆ ಫಲಾನುಭವಿಗಳಿಗೆ ಶೀಘ್ರದಲ್ಲೇ ಲಸಿಕಾ ಕೇಂದ್ರದ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ...

Published: 02nd March 2021 01:28 PM  |   Last Updated: 02nd March 2021 01:28 PM   |  A+A-


An elderly woman takes the jab at K C General Hospital on Monday

ವೃದ್ಧ ಮಹಿಳೆಯೊಬ್ಬರು ಕೊರೋನಾ ಲಸಿಕೆ ಪಡೆಯುತ್ತಿರುವುದು

Posted By : Manjula VN
Source : The New Indian Express

ಬೆಂಗಳೂರು: ಮಾ.1ರಿಂದ 60 ವರ್ಷ ಮೇಲ್ಪಟ್ಟನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿಗೆ ತುತ್ತಾದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನೀಡುವ ಅಭಿಯಾನ ಆರಂಭವಾಗಿದ್ದು, ಲಸಿಕೆ ಫಲಾನುಭವಿಗಳಿಗೆ ಶೀಘ್ರದಲ್ಲೇ ಲಸಿಕಾ ಕೇಂದ್ರದ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ ಅವರು ಹೇಳಿದ್ದಾರೆ.

ಬೆಂಗಳೂರಿನ 6 ಕೇಂದ್ರಗಳಲ್ಲಿ ಲಸಿಕೆ ತಡವಾಗುತ್ತಿರುವುದು ಗಮನಕ್ಕೆ ಬಂದಿದೆ. ತಾಂತ್ರಿಕ ಸಮಸ್ಯೆಗಳೂ ಎದುರಾಗಿವೆ. ಆದರೆ, ಇತರೆ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಉತ್ತಮ ರೀತಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ವೈಟ್ ಫೀಲ್ಡ್ ನಿಂದ ಲಸಿಕೆ ಪಡೆಯುವ ಸಲುವಾಗಿ ಕೆಸಿ ಜನರಲ್ ಆಸ್ಪತ್ರೆಗೆ ಬಂದಿದ್ದೆವು, ಮೂರು ಗಂಟೆಗಳ ಕಾದು ಕುಳಿತರೂ ಲಸಿಕೆ ಸಿಗಲಿಲ್ಲ. ಸ್ಥಳೀಯ ಅಧಿಕಾರಿಗಳಿಗೆ ಕಾರಣವೇ ತಿಳಿದಿರಲಿಲ್ಲ. ಪ್ರಶ್ನಿಸಿದೆ, ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಬಂದಿಲ್ಲ ಎಂದು ಹೇಳುತ್ತಿದ್ದರು ಎಂದು ಲಸಿಕೆ ಪಡೆಯಲು ಬಂದಿದ್ದ ಮಹಿಳೆಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಕೋವಿನ್ ಆ್ಯಪ್ ನಲ್ಲಿ ತಾಂತ್ರಿಕ ಸಮಸ್ಯೆಗಳು ಪರಿಹಾರಗೊಳ್ಳುವವರೆಗೂ ಕಾಯದ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಬಿ.ಆರ್. ವೆಂಕಟೇಶಯ್ಯ ಅವರು ಅಧಿಕಾರಿಗಳೊಂದಿಗೆ ಮಾತನಾಡಿ ಆನ್'ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಲಸಿಕೆ ನೀಡಲು ಆರಂಭಿಸಿದ್ದರು. ಸರ್ಕಾರದ ಆದೇಶದಂತೆ ಲಸಿಕೆ ಅಭಿಯಾನ ಮಧ್ಯಾಹ್ನ 12 ರಿಂದ 5 ಗಂಟೆಯವರೆಗೂ ಎಂದು ಮಾಹಿತಿ ನೀಡಲಾಗಿದೆ. ಆದರೆ, ಕೋವಿನ್ ಆ್ಯಪ್ ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಎಂದು ತಿಳಿಸಲಾಗಿದ್ದು, ಜನರು ಗೊಂದಲಕ್ಕೆ ಸಿಲುಕುವಂತಾಗಿತ್ತು.

ಮೈಸೂರಿನಲ್ಲಿ ನೋಂದಣಿ ಮಾಡಿಕೊಂಡಿಡ್ಡ 1000 ಜನರ ಪೈಕಿ 294 ಮಂದಿಗೆ ಲಸಿಕೆ ನೀಡಲಾಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 39 ಮಂದಿ ವಯೋವೃದ್ಧರಿಗೆ ಲಸಿಕೆ ನೀಡಲಾಗಿದೆ. ಉಡುಪಿಯಲ್ಲಿ 85 ಮಂದಿ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp