ರಾಜ್ಯದಲ್ಲಿ ಇಂದು ಹೊಸದಾಗಿ 528 ಕೊರೋನಾ ಪ್ರಕರಣಗಳು ಪತ್ತೆ, 3 ಸಾವು!

ರಾಜ್ಯದಲ್ಲಿ ಇಂದು 528 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,52,565ಕ್ಕೆ ಏರಿಕೆಯಾಗಿದೆ.

Published: 03rd March 2021 08:00 PM  |   Last Updated: 03rd March 2021 08:00 PM   |  A+A-


plasma therapy treatment for covid 19 Patients

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಇಂದು 528 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,52,565ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,346ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 311 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,06,440ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 413 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,34,143ಕ್ಕೆ ಏರಿಕೆಯಾಗಿದೆ. ಇನ್ನು 5824 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 116 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp