ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಬೆಂಗಳೂರು ವಕೀಲರಿಂದ ಪ್ರತಿಭಟನೆ

ವಕೀಲರ ವಿರುದ್ಧ ದೌರ್ಜನ್ಯ ಹಾಗೂ ಸುಳ್ಳು ಪ್ರಕರಣಗಳು ದಾಖಲಿಸುವುದು ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘ ಬುಧವಾರ ಪ್ರತಿಭಟನೆ ನಡೆಸಿತು.

Published: 03rd March 2021 06:48 PM  |   Last Updated: 03rd March 2021 06:48 PM   |  A+A-


advocat

ವಕೀಲರ ಪ್ರತಿಭಟನೆ

Posted By : Lingaraj Badiger
Source : The New Indian Express

ಬೆಂಗಳೂರು: ವಕೀಲರ ವಿರುದ್ಧ ದೌರ್ಜನ್ಯ ಹಾಗೂ ಸುಳ್ಳು ಪ್ರಕರಣಗಳು ದಾಖಲಿಸುವುದು ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘ ಬುಧವಾರ ಪ್ರತಿಭಟನೆ ನಡೆಸಿತು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎಪಿ ರಂಗನಾಥ ನೇತೃತ್ವದಲ್ಲಿ ಕರ್ನಾಟಕ ಹೈಕೋರ್ಟ್ ನ ಗೋಲ್ಡನ್ ಜುಬಿಲಿ ಗೇಟ್‌ ಬಳಿ ವಕೀಲರು ಪ್ರತಿಭಟನೆ ನಡೆಸಿದರು.

ದಿನದಿಂದ ದಿನಕ್ಕೆ ವಕೀಲರ ಮೇಲೆ ಹಲ್ಲೆ, ಕೊಲೆ ಹಾಗೂ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ತಕ್ಷಣವೇ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿದರು.

ಇದೇ ವೇಳೆ ಹೊಸಪೇಟೆಯ ಕೋರ್ಟ್‌ ಆವರಣದಲ್ಲಿ ಫೆಬ್ರವರಿ 27 ರಂದು ನಡೆದ ವಕೀಲ ಡಾ.ತಾರಿಹಳ್ಳಿ ವೆಂಕಟೇಶ್ ಅವರ ಹತ್ಯೆಯನ್ನು ಖಂಡಿಸಲಾಯಿತು ಮತ್ತು ಇಂತಹ ಹತ್ಯೆಗಳನ್ನು ತಡೆಯಲು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp