ಮೃತ ರೈತರ ಕುಟುಂಬಕ್ಕೆ ಪರಿಹಾರ: ನಿಲುವು ಸ್ಪಷ್ಟಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರೆ ಅಂತಹ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ರೀತಿ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.

Published: 03rd March 2021 07:59 AM  |   Last Updated: 03rd March 2021 01:12 PM   |  A+A-


High court (File photo)

ಹೈಕೋರ್ಟ್ (ಸಂಗ್ರಹ ಚಿತ್ರ)

Posted By : Manjula VN
Source : The New Indian Express

ಬೆಂಗಳೂರು: ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರೆ ಅಂತಹ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ರೀತಿ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸಿಲ್ಲ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ಸಂಚಾಲಕ ಮಲ್ಲಗೌಡ ಪರಿವಾಣ ಹೈಕೋರ್ಟ್'ಗೆ ಸಾರ್ವಜಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರಿ ವಕೀಲರು ಹಾಜರಾಕಿ ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಪ್ರಮಾಣಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಖಾಸಗಿ ಲೇವಾದೇವಿದಾರರಿಂದ ರೈತರು ಸಾಲ ಪಡೆದುಕೊಳ್ಳುವುದನ್ನು ತಡೆಯುವುದು ಮತ್ತು ನಿರ್ಬಂಧಿಸುವುದು ಸರ್ಕಾರದ ನಿಯಂತ್ರಣದಲ್ಲಿ ಇಲ್ಲ. ಇಂತಹ ಪ್ರಕರಣಗಳಲ್ಲಿ ಪರಿಹಾರದ ನಿರ್ಧಾರಕ್ಕೆ ಅಡ್ಡಿಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ, ಸಾಲ ಮಾಡಿ ಅದನ್ನು ಮರು ಪಾವತಿ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಸರ್ಕಾರಿ ಬ್ಯಾಂಕುಗಳಿಂದ ಸಾಲ ಪಡೆದ ರೈತರು, ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದ ರೈತರು ಎಂಬ ಎರಡು ವರ್ಗ ಸೃಷ್ಟಿ ಮಾಡಲು ಸರ್ಕಾರ ಹೊರಟಂತಿದೆ. ಖಾಸಗಿ ಲೇವಾದೇವಿದಾರರ ಬಳಿ ಹೋಗುವ ಸ್ಥಿತಿ ರೈತರಿಗೆ ಬಂದಿದ್ದಾದರೂ ಹೇಗೆ ಎಂಬುದಕ್ಕೆ ಸರ್ಕಾರ ಯೋಜಿಸಬೇಕಲ್ಲವೇ ಎಂದು ಪ್ರಶ್ನಿಸಿತು. ನಂತರ ಈ ಬಗ್ಗೆ ಸ್ಪಷ್ಟ ನಿಲುವು ತಿಳಿಸಿ 3 ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕೆಂದು ವಿಚಾರಣೆ ಮುಂದೂಡಿತು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp