ಉಡುಪಿಯಲ್ಲಿ ಕೊರೋನಾ ಸೋಂಕು ಉಲ್ಬಣ: ಮಾರ್ಷಲ್'ಗಳ ನೇಮಕ

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದ್ದಾರೆ.

Published: 03rd March 2021 01:43 PM  |   Last Updated: 03rd March 2021 01:56 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾರ್ಷಲ್‌ಗಳನ್ನು ನೇಮಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸುವವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಕೇರಳ ಮತ್ತು ಮಹಾರಾಷ್ಟ್ರದ ಎಲ್ಲ ಜನರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಬೇಕಾಗುತ್ತದೆ ಮತ್ತು ಕೋವಿಡ್ ನಕಾರಾತ್ಮಕ ವರದಿಗಳು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp