ಮಂಜೇಶ್ವರದ ಪ್ಲೈವುಡ್ ಕಾರ್ಖಾನೆಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಇಲ್ಲಿಗೆ ಸಮೀಪದ ಕೇರಳದ ಮಂಜೇಶ್ವರದಲ್ಲಿ ಪ್ಲೈವುಡ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬಾಯ್ಲರ್ ಸ್ಫೋಟಿಸಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published: 03rd March 2021 02:17 PM  |   Last Updated: 03rd March 2021 02:38 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಮಂಗಳೂರು: ಇಲ್ಲಿಗೆ ಸಮೀಪದ ಕೇರಳದ ಮಂಜೇಶ್ವರದಲ್ಲಿ ಪ್ಲೈವುಡ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬಾಯ್ಲರ್ ಸ್ಫೋಟಿಸಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರೆಲ್ಲರೂ ಬಿಹಾರ ಮೂಲದ ಕಾರ್ಮಿಕರಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ತಕ್ಷಣ ಬೆಂಕಿ ದುರಂತ ಸಂಭವಿಸಿದ್ದರಿಂದ ಕಾರ್ಖಾನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ. ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp