ಸೆಕ್ಸ್ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ರಾಜಿನಾಮೆ ಅಂಗೀಕರಿಸಿದ ಸಿಎಂ ಬಿಎಸ್ ವೈ

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

Published: 03rd March 2021 02:27 PM  |   Last Updated: 03rd March 2021 02:39 PM   |  A+A-


Ramesh Jarkiholi-CM BSY

ರಮೇಶ್ ಜಾರಕಿಹೊಳಿ-ಸಿಎಂ ಬಿಎಸ್ ವೈ

Posted By : Srinivasamurthy VN
Source : ANI

ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ರಾಜಿನಾಮೆ ನೀಡಿದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ. ಈ ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕಿದ್ದು, ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಈದೀಗ ಈ ರಾಜಿನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಂಗೀಕರಿಸಿದ್ದು, ರಾಜ್ಯಪಾಲರ ಅನುಮೋದನೆಗಾಗಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp