ಬೆಂಗಳೂರು: ವಿಟಿಯು ಮೂರನೇ ಸೆಮಿಸ್ಟರ್ ಪರೀಕ್ಷೆ 10 ದಿನ ವಿಳಂಬ

ಮ್ಯಾನೇಜ್ ಮೆಂಟ್ ಕೋಟಾದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸುವಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯು ವಿಳಂಬ ಮಾಡುತ್ತಿರುವ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು 10 ದಿನಗಳ ಕಾಲ ಮುಂದೂಡಿದೆ. 

Published: 03rd March 2021 02:05 PM  |   Last Updated: 03rd March 2021 02:05 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ಮ್ಯಾನೇಜ್ ಮೆಂಟ್ ಕೋಟಾದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸುವಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯು ವಿಳಂಬ ಮಾಡುತ್ತಿರುವ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು 10 ದಿನಗಳ ಕಾಲ ಮುಂದೂಡಿದೆ. 

ಮಾರ್ಚ್ 15 ರಿಂದ ಪರೀಕ್ಷೆಗಳು ಆರಂಭವಾಗಲಿವೆ ಎಂದು ವಿಟಿಯು ಕುಲಪತಿ  ಕರಿಸಿದ್ದಪ್ಪ ಹೇಳಿದ್ದಾರೆ.  ಸಿಇಟಿ ಅಂಕಗಳ ಆಧಾರದ ಮೇಲೆ ಪ್ರವೇಶ ಪಡೆದವರು ತಮ್ಮ ಮಾಹಿತಿ ಪರಿಶೀಲನೆ ಪೂರ್ಣಗೊಂಡಿದೆ, ಆದರೆ ಮ್ಯಾನೇಜ್ ಮೆಂಟ್ ಕೋಟಾ ವಿದ್ಯಾರ್ಥಿಗಳ ಪರಿಶೀಲನೆ ಇನ್ನೂ ಮುಗಿದಿಲ್ಲ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಪರೀಕ್ಷೆಯ ದಿನಾಂಕ ವಿಸ್ತರಣೆಯಿಂದ ಎರಡು  ಪ್ರಯೋಜನಗಳಾಗಲಿವೆ, ಒಂದು, ದಾಖಲೆಗಳನ್ನು ಪರಿಶೀಲಿಸಿ ಅನುಮೋದಿಸಲಾಗುತ್ತದೆ, ಮತ್ತು ಎರಡನೇಯದಾಗಿ, ವಿದ್ಯಾರ್ಥಿಗಳು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಮಯಸಿಗುತ್ತದೆ. 

ಮಾರ್ಚ್ 31ರೊಳಗೆ ಈ ಸೆಮಿಸ್ಟರ್ ಪರೀಕ್ಷೆಗಳು ಪೂರ್ಣಗೊಳ್ಳಬೇಕು,  ಏಪ್ರಿಲ್ 14ರಿಂದ ಮುಂದಿನ ಸೆಮಿಸ್ಟರ್ ತರಗತಿಗಳು ಆರಂಭವಾಗಲಿವೆ ಎಂದಪ ಅವರು ತಿಳಿಸಿದ್ದಾರೆ.

ಕ್ಯಾಂಪಸ್‌ನಲ್ಲಿನ ಸ್ಟಾರ್ಟ್‌ಅಪ್‌ಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶ್ವವಿದ್ಯಾಲಯವು ತನ್ನದೇ ಆದ ಆರಂಭಿಕ ನೀತಿಯನ್ನು ಸಿದ್ಧಪಡಿಸುತ್ತಿದೆ. ಈ ನೀತಿಯು ವಿದ್ಯಾರ್ಥಿಗಳಿಗೆ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಸಾಮಾಜಿಕವಾಗಿ ಪ್ರಸ್ತುತವಾಗಿರುವವ ಉತ್ಪನ್ನಗಳನ್ನು ಉತ್ಪಾದಿಸಲು ಹಣ ಒದಗಿಸುತ್ತದೆ.
 


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp