ಬೆಂಗಳೂರಿನಲ್ಲಿ 385 ಸೇರಿ ರಾಜ್ಯದಲ್ಲಿ ಇಂದು 571 ಕೊರೋನಾ ಪ್ರಕರಣಗಳು ಪತ್ತೆ, 4 ಸಾವು!

ರಾಜ್ಯದಲ್ಲಿ ಇಂದು 571 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ.

Published: 04th March 2021 07:26 PM  |   Last Updated: 04th March 2021 07:26 PM   |  A+A-


Covid-19_Patient1

ಸಾಂದರ್ಭಿಕ ಚಿತ್ರ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಇಂದು 571 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,350ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 385 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,06,825ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 496 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,34,639ಕ್ಕೆ ಏರಿಕೆಯಾಗಿದೆ. ಇನ್ನು 6,128 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp