ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ವಿರೋಧ

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Published: 04th March 2021 12:49 PM  |   Last Updated: 04th March 2021 01:55 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಒಂದು ದೇಶ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚೆಗೆ ನಿಧನ ಹೊಂದಿದ ನಿವೃತ್ತ ನ್ಯಾಯಮೂರ್ತಿ ಹಾಗೂ ರಾಜ್ಯಪಾಲರಾಗಿದ್ದ ರಾಮಜೋಯಿಸ್ ರವರಿಗೆ ಪರಿಷತ್​ನಲ್ಲಿ ಸಂತಾಪ ಸೂಚನೆ ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಯಿತು.

ವಿಧಾನಸಭೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಸ್ಪೀಕರ್ ಕಾಗೇರಿಯವರು ಪ್ರಸ್ತಾಪಿಸಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಒಂದು ದೇಶ ಒಂದು ಚುನಾವಣೆ ಯೋಚನೆಯೇ ಅವಾಸ್ತವಿಕ ಎಂದು ಹೇಳಿದರು.

ಬಳಿಕ ಮಾತನಾಡಿದ ಕೆ.ರಮೇಶ್ ಕುಮಾರ್ ಅವರು, ಬೇರೆ ಸಿದ್ಧಾಂತವಿಟ್ಟುಕೊಂಡು ಇಂತಹ ವಿಚಾರದ ಚರ್ಚೆ ಬೇಡ. ಸ್ಪೀಕರ್ ವಿಶೇಷಾಧಿಕಾರ ದುರುಪಯೋಗ ಸರಿಯಲ್ಲ ಎಂದು ಹೇಳಿದರು.

ಇದಕ್ಕೆ ಅಸಮಾಧಾನಗೊಂಡ ಸ್ಪೀಕರ್ ಕಾಗೇರಿಯವರು, ನಿಮ್ಮ ಮಾತು ನಿಮ್ಮ ಘನತೆಗೆ ಸರಿಹೋಗಲ್ಲ ಎಂದು ಹೇಳಿದರು.

ಸ್ಪೀಕರ್ ಕ್ರಮಕ್ಕೆ ವಿರೋಧ ಪಕ್ಷದ ನಾಯಕರು ವಿರೋಧ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಸ್ಪೀಕರ್ ಕಾಗೇರಿಯವರು ಚರ್ಚೆಗೆ ಅವಕಾಶ ನೀಡಿದರು. ವಿರೋಧದ ನಡುವೆಯೂ ಸದನದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ ಅವರು,  ಇದು ಸಮಯ ಮತ್ತು ಸಂಪನ್ಮೂಲಗಳ ದೃಷ್ಟಿಯಿಂದ ಒಳ್ಳೆಯದು. ಒಂದು ದೇಶ – ಒಂದು ಚುನಾವಣೆ ನಿಯಮದಿಂದ ಕೆಲವು ರಾಜಕೀಯ ಹೊಂದಾಣಿಕೆ ಅನಿವಾರ್ಯ ಆಗಲಿದೆ. ಲೋಕಸಭಾ – ವಿಧಾನಸಭಾ ಅವಧಿಯಲ್ಲಿ ಏರಿಳಿತಗಳು ಆಗಬಹುದು. ಇದನ್ನು ಜಾರಿ ಮಾಡುವುದು ಬಹುದೊಡ್ಡ ಸವಾಲು. ಆದರೆ, ಏಕಕಾಲದಲ್ಲಿ ಚುನಾವಣೆ ನಡೆದರೆ ಆಡಳಿತ ಯಂತ್ರದ ಸುಗಮ ಹಾಗೂ ದಕ್ಷ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ನಿಯಮ ಕುರಿತು ಆಳವಾದ ಅಧ್ಯಯನ ಮತ್ತು ಸಮಾಲೋಚನೆ ಅಗತ್ಯವಿದೆ. ಈ ಕುರಿತು ನಿರ್ಣಯ ಕೈಗೊಂಡು ಶಿಫಾರಸು ಮಾಡಲಿ ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ನಾಯಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಾಗೇರಿಯವರು ವಿಧಾನಸಭೆ ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಿದರು.

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp