ಬೆಂಗಳೂರು ಘನತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಘಟಕ: ಸಚಿವ ಸಂಪುಟ ಒಪ್ಪಿಗೆ

ಸಿಲಿಕಾನ್ ಸಿಟಿಯಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ಸಮಗ್ರ ನಿರ್ವಹಣೆಗೆ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಲಿಮಿಟೆಡ್ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪನೆಗೆ ರಾಜ್ಯ ಸಂಪುಟ ಅನುಮತಿ ನೀಡಿದೆ.

Published: 04th March 2021 11:53 AM  |   Last Updated: 04th March 2021 11:53 AM   |  A+A-


RDPR Minister K S Eswarappa arrives for the cabinet meeting at Vidhana Soudha

ಸಂಪುಟ ಸಭೆಗೆ ತೆರಳುತ್ತಿರುವ ಸಚಿವ ಈಶ್ವರಪ್ಪ

The New Indian Express

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ಸಮಗ್ರ ನಿರ್ವಹಣೆಗೆ ಬೆಂಗಳೂರು ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಲಿಮಿಟೆಡ್ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪನೆಗೆ ರಾಜ್ಯ ಸಂಪುಟ ಅನುಮತಿ ನೀಡಿದೆ.

ನಿನ್ನೆಯಷ್ಟೇ ನಡೆದ ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಎಲ್ಲಾ ರೀತಿಯ ತ್ಯಾಜ್ಯ ಸಂಗ್ರಹ, ಸಾಗಣೆ ಮತ್ತು ವಿಲೇವಾರಿ, ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಸೇರಿ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕಾರ್ಯಕ್ಕೆ ಸರ್ಕಾರದಿಂದಲೇ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿರ್ವಹಣಾ ಕಂಪನಿ ಸ್ಥಾಪನೆಗೆ ಸಭೆ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ತ್ಯಾಜ್ಯ ಕರ ನಿಗದಿ ಸೇರಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ವಿಷಯಗಳೂ ಈ ಕಂಪನಿ ಆಡಳಿತಕ್ಕೆ ಒಳಪಡಲಿದ್ದು, ಕಂಪನಿಯೇ ತೀರ್ಮಾನಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ ನಿತ್ಯ 5500 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದರಲ್ಲಿ ಮನೆಗಳಿಂದ 4000 ಟನ್, ಹೋಟೆಲ್, ಮಾಲ್ ಇತರೆ ಉದ್ಯಮಗಳಿಂದ 1500 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದರ ನಿರ್ವಹಣೆಗೆ ಸಂಪೂರ್ಣ ಆಡಳಿತ ಮತ್ತು ಹಣಕಾಸು ಸ್ವತಂತ್ರ ಇರುವ ಸಂಸ್ಥೆ ಸ್ಥಾಪಿಸಬೇಕೆಂದು ಬಹಳ ಜನರ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕಂಪನಿಯ ಕಾರ್ಯನಿರ್ವಹಣೆಗೆ ಬಿಬಿಎಂಪಿ ಶೇ.51ರಷಅಟು ಮತ್ತು ಸರ್ಕಾರದಿಂದ ಶೇ.49ರಷ್ಟು ಅನುದಾನ ಒದಗಿಸಲಿವೆ.

ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಂತದ ಅಧಿಕಾರಿಯನ್ನು ಈ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದು, ಅವುಗಳಲ್ಲಿ ನಾಲ್ಕು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದ ಮೂರು ಘಟಕಗಳನ್ನು ಆರಂಭಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಮೂರು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಗೆ ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.


Stay up to date on all the latest ರಾಜ್ಯ news
Poll
Swami Prasad Maurya joins Samajwadi Party

ಉತ್ತರ ಪ್ರದೇಶದಲ್ಲಿ ಏಳು ಮಂದಿ ನಾಯಕರು ಪಕ್ಷ ತೊರೆದಿರುವುದು ಬಿಜೆಪಿಗೆ ಸೋಲಿನ ಮೊದಲ ಮುನ್ಸೂಚನೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp