ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಅಂಗನವಾಡಿ ಕಾರ್ಯಕರ್ತೆಯರ ಅನೇಕ ವರ್ಷಗಳ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಗುರುವಾರ ಹೇಳಿದ್ದಾರೆ.

Published: 04th March 2021 07:22 PM  |   Last Updated: 04th March 2021 07:22 PM   |  A+A-


jolle

ಶಶಿಕಲಾ ಜೊಲ್ಲೆ

Posted By : Lingaraj Badiger
Source : UNI

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಅನೇಕ ವರ್ಷಗಳ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಗುರುವಾರ ಹೇಳಿದ್ದಾರೆ.

ಬಜೆಟ್‌ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖವಾಗಿ ಕೆಲ ಬೇಡಿಕೆ ಈಡೇರಿಕೆಗೆ ಒತ್ತಾಯ ಮಾಡಿದ್ದರು. ಇದರಲ್ಲಿ ರಾಜ್ಯ ಸರ್ಕಾರ ಕೆಲವು ಬೇಡಿಕೆ ಈಡೇರಿಸಬಹುದು ಎಂದರು.

ನಿನ್ನೆ ಅವರ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ನಮ್ಮ ಸರ್ಕಾರದ ಮಟ್ಟದಲ್ಲಿ ಆಗುವ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ. ಕೇಂದ್ರ ಸರ್ಕಾರದ ಸಚಿವರ ಜೊತೆಯಲ್ಲೂ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಒಂದಷ್ಟು ಬೇಡಿಕೆ ಈಡೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ನಿಮ್ಮ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸುವ ಕೆಲಸ ಮಾಡಲಾಗುವುದು. ಭರವಸೆಯಲ್ಲ, ವಿಶ್ವಾಸದ ನುಡಿಗಳನ್ನು ಹೇಳುತ್ತೇನೆ. ರಾಜ್ಯ ಸರ್ಕಾರ ನಿಮ್ಮ ಜೊತೆ ಇರಲಿದೆ. ದಯಮಾಡಿ ಮಹಿಳೆಯರೆಲ್ಲ ಹೋರಾಟ ಮಾಡುವುದು ಬಿಡಿ ಎಂದು ಶಶಿಕಲಾ ಜೊಲ್ಲೆ ಮನವಿ ಮಾಡಿಕೊಂಡರು.


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp