ಕೋಲಾರದಲ್ಲಿ ಪಿಎಸ್‌ಐ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿ ಆರೋಪಿ ಪರಾರಿ

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸಲು ಕೋಲಾರಕ್ಕೆ ತೆರಳಿದಾಗ ಆರೋಪಿ ಪಿಎಸ್‌ಐ ಮೇಲೆಯೇ ಲಾಂಗ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

Published: 04th March 2021 03:45 PM  |   Last Updated: 04th March 2021 03:45 PM   |  A+A-


psi-hari1

ಪಿಎಸ್‌ಐ ಹರಿನಾಥ್

Posted By : Lingaraj Badiger
Source : UNI

ಬೆಂಗಳೂರು: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸಲು ಕೋಲಾರಕ್ಕೆ ತೆರಳಿದಾಗ ಆರೋಪಿ ಪಿಎಸ್‌ಐ ಮೇಲೆಯೇ ಲಾಂಗ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ನಗರದ ವೈಟ್‌ಫೀಲ್ಡ್ ಉಪವಿಭಾಗ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಅಪ್ಟೆನ್, ಹಲವು ದಿನಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದನು. ಕೆಜಿಎಫ್‌ ನಲ್ಲಿಆರೋಪಿ ಇರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಹದೇವಪುರ ಠಾಣೆ ಪಿಎಸ್‌ಐ ಹರಿನಾಥ್ ಹಾಗೂ ಸಿಬ್ಬಂದಿ ಬುಧವಾರ ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ಬಂಧಿಸಲು ಮುಂದಾಗಿದ್ದರು. 

ಈ ವೇಳೆ ಆರೋಪಿ ಪಿಎಸ್ಐ ಬಲಗೈಗೆ ‌ಲಾಂಗ್ ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹೀಗಾಗಿ ತಮ್ಮ ಆತ್ಮರಕ್ಷಣೆಗಾಗಿ ಪಿಎಸ್‌ಐ ಆರೋಪಿ ಮೇಲೆ ಗುಂಡು ಹಾರಿಸಿದ್ದರು. ಅದರಿಂದ ತಪ್ಪಿಸಿಕೊಂಡು ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಾಯಗೊಂಡಿರುವ ಪಿಎಸ್‌ಐ ಹರಿನಾಥ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಾರಿಯಾದ ಆರೋಪಿ ಪತ್ತೆಗೂ ಶೋಧ ನಡೆದಿದೆ ಎಂದೂ ಮೂಲಗಳು ತಿಳಿಸಿವೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp