ರಾಮನ ಬಗ್ಗೆ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದ ಯುವಕನ ಮನೆ ಮೇಲೆ ದಾಳಿ: ಮೂವರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಭಗವಾನ್ ರಾಮನ ಬಗ್ಗೆ  ಪೋಸ್ಟ್  ಹಾಕಿದ್ದಕ್ಕೆ ಯುವಕನೊಬ್ಬನ ಮನೆ ಮೇಲೆ ದಾಳಿ ನಡೆಸಿ, ನಿಂಧಿಸಿದ್ದ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ದೂರು ದಾಖಲಿಸಿದ್ದಾರೆ.

Published: 04th March 2021 08:43 PM  |   Last Updated: 04th March 2021 08:54 PM   |  A+A-


Casual_Images1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಗವಾನ್ ರಾಮನ ಬಗ್ಗೆ  ಪೋಸ್ಟ್  ಹಾಕಿದ್ದಕ್ಕೆ ಯುವಕನೊಬ್ಬನ ಮನೆ ಮೇಲೆ ದಾಳಿ ನಡೆಸಿ, ನಿಂಧಿಸಿದ್ದ ಐವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ದೂರು ದಾಖಲಿಸಿದ್ದಾರೆ.

ಭಗವಾನ್ ರಾಮನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಿಂಗಳ ಹಿಂದೆ  ಪೋಸ್ಟ್ ಮಾಡಿದ್ದಕ್ಕೆ  ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ಕಿಲಾಡಿ ನಿವಾಸಿಗಳಾದ ಉಬೈದ್ ಮತ್ತು ಮುಕುಂದ ನಡುವೆ ಜಗಳ ನಡೆದಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣದ ಬಗ್ಗೆ ಮುಕುಂದ  ತಿಂಗಳ ಹಿಂದೆ  ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಎಂದು ಅವರು ಹೇಳಿದ್ದಾರೆ.

ಮಾರ್ಚ್ 2 ರಂದು ರಾತ್ರಿ 11 ಗಂಟೆಯಲ್ಲಿ ಫರ್ಜೀನ್, ರಶೀದ್ ಮತ್ತಿತರ ಇಬ್ಬರು ಎಸ್ ಡಿಪಿಐ ಕಾರ್ಯಕರ್ತರೊಂದಿಗೆ ಮುಕುಂದನ ಮನೆ ಹತ್ತಿರ ಬಂದ ಪ್ರಮುಖ ಆರೋಪಿ ಉಬೈದ್, ಗೇಟ್ ಕಿತ್ತು ಹಾಕಿ, ನಿಲ್ಲಿಸಿದ ಕಾರಿನ ಲೈಟ್ ನ್ನು ಒಡೆದು ಹಾಕಿದ್ದು, ಮನಬಂದಂತೆ ಮುಕುಂದನನ್ನು ನಿಂದಿಸಿದ್ದಾರೆ. 

ಮಾರನೇ ದಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಎಸ್ ಪಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಲ್ಲಿ ಶ್ರೀರಾಮನ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ಎಸ್ ಡಿಪಿಐ ಕಾರ್ಯಕರ್ತರು ಮನೆ ಮೇಲೆ ದಾಳಿ ನಡೆಸಿ, ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಡಿಜಿಪಿ ಮತ್ತು ಎಸ್ ಪಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp