ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್, ಪ್ರಾಂಶುಪಾಲರ ಮೇಲೆ ಹಲ್ಲೆ: ನಾಲ್ವರು ವಿದ್ಯಾರ್ಥಿಗಳ ಬಂಧನ

ಕಿರಿಯ ವಿದ್ಯಾರ್ಥಿಯೊಬ್ಬರ ಮೇಲೆ ರ‍್ಯಾಗಿಂಗ್ ಮತ್ತು ಕಾಲೇಜೊಂದರ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ...

Published: 05th March 2021 05:08 PM  |   Last Updated: 05th March 2021 05:08 PM   |  A+A-


arrested

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಮಂಗಳೂರು: ಕಿರಿಯ ವಿದ್ಯಾರ್ಥಿಯೊಬ್ಬರ ಮೇಲೆ ರ‍್ಯಾಗಿಂಗ್ ಮತ್ತು ಕಾಲೇಜೊಂದರ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ.
  
ಮುಕ್ಕಾದ ಶ್ರೀನಿವಾಸ್ ಕಾಲೇಜಿನ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮುಹಮ್ಮದ್ ಬಜಿಲ್, ಕೆ ಹೆಚ್ ಶಮೀಲ್, ಸಂಭ್ರಮ್ ಆಳ್ವಾ ಮತ್ತು ಅಶ್ವಿನ್ ಜಾನ್ಸನ್ ಅವರು, ಅದೇ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ನಡೆಸಿದ್ದಾರೆ. ನಂತರ ವಿದ್ಯಾರ್ಥಿ ಪ್ರಾಂಶುಪಾಲರಿಗೆ ದೂರು ನೀಡಿದ್ದಾನೆ. ಬಳಿಕ ಪ್ರಾಂಶುಪಾಲರು ರ್ಯಾಂಗಿಂಗ್ ನಡೆಸಿದ ವಿದ್ಯಾರ್ಥಿಗಳನ್ನು ಕರೆದು ಇಂತಹ ಘಟನೆಗಳು ಮರುಕಳಿಸಿದರೆ ಕಾಲೇಜಿನಿಂದ ಹೊರಹಾಕುವುದಾಗಿ ಎಚ್ಚರಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಆರೋಪಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಈ ಮಧ್ಯೆ, ಆರೋಪಿ ವಿದ್ಯಾರ್ಥಿಗಳು ಉಪನ್ಯಾಸಕರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿ ಮತ್ತು ಉಪನ್ಯಾಸಕರ ಪ್ರತ್ಯೇಕ ದೂರುಗಳ ಆಧಾರದ ಮೇಲೆ ಪೊಲೀಸರು ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp