ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಗೃಹ ಸಚಿವ ಬೊಮ್ಮಾಯಿ

ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

Published: 05th March 2021 03:18 PM  |   Last Updated: 05th March 2021 04:40 PM   |  A+A-


Bengaluru traffic police

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ  ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, 'ಸಿಸಿಟಿವಿ ಕ್ಯಾಮೆರಾ ಇಲ್ಲದ ಕಡೆಗಳಲ್ಲಿ ಸಿಗ್ನಲ್ ಜಂಪ್, ಅತಿ ವೇಗ ವಾಹನಗಳನ್ನು ಪತ್ತೆಹಚ್ಚಲು ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ವಾಹನ ಮತ್ತು ಸವಾರರನ್ನು ಹಿಡಿಯಲು ಪೊಲೀಸರು ರಸ್ತೆಯಲ್ಲಿ ಅಡ್ಡಬರುವುದು ಗಮನಕ್ಕೆ ಬಂದಿದೆ. ಅಂತಹ ಸಂದರ್ಭದಲ್ಲಿ ಅಪಘಾತವಾಗದಂತೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಾನುಸಾರ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅಂತೆಯೇ ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, ಪಶ್ಚಿಮ ಮತ್ತು ಉತ್ತರ ವಲಯ ಇವೆ. ಹೊಸದಾಗಿ, ನಾಲ್ಕನೇ ವಲಯ ಅಥವಾ ದಕ್ಷಿಣ ವಲಯ ರಚಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು ಎಂದು ಹೇಳಿದ ಬೊಮ್ಮಾಯಿ, 'ಈ ಸಂಬಂಧ ಪೊಲೀಸ್‌ ಕಮಿಷನರ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್‌ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು. 
 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp