ಕೋವಿಡ್ ಲಸಿಕೆ ಉಚಿತವಾಗಿ ವಿತರಣೆಯಾಗಲಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ.

Published: 05th March 2021 12:25 PM  |   Last Updated: 05th March 2021 12:58 PM   |  A+A-


siddaramaiah

ಸಿದ್ದರಾಮಯ್ಯ

Posted By : Srinivasamurthy VN
Source : ANI

ಬೆಂಗಳೂರು: ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ.

ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಶುರುವಾಗಿದ್ದು, 3ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಕೋಮಾರ್ಬಿಡಿಟಿ ರೋಗಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಏತನ್ಮಧ್ಯೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಪ್ರತೀ ಡೋಸ್ ಗೆ 250 ರೂಗಳನ್ನು ಸರ್ಕಾರ ನಿಗದಿ ಮಾಡಿದೆ. ಇದೇ ಕಾರಣಕ್ಕೆ ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೋವಿಡ್‌ ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂಕಷ್ಟದ ಅವಧಿಯಲ್ಲಿ ವ್ಯಾಕ್ಸಿಲ್ ನಿರೀಕ್ಷೆ ಹುಟ್ಟಿಸಿದೆ. ಆದರೆ ಅಭಿಯಾನ ನಿಧಾನಗತಿಯಲ್ಲಿ ಸಾಗುತ್ತಿದೆ. ಇದುವರೆಗೆ ದೇಶದ ಜನಸಂಖ್ಯೆಯ ಒಟ್ಟು ಶೇ.0.5 ರಷ್ಟು ಮಂದಿಗೆ ಮಾತ್ರ ಲಿಸಿಕೆ ಸಿಕ್ಕಿದೆ.

ಇಸ್ರೇಲ್ 36 ಶೇ, ಅಮೆರಿಕಾ 6 ಶೇ, ಇಂಗ್ಲೆಂಡ್‌ 4 ಶೇ ಜನಸಂಖ್ಯೆಗೆ ಕೋವಿಡ್ ಲಸಿಕೆಯನ್ನು ನೀಡಿದೆ. ಉಚಿತವಾಗಿ ಈ ಎಲ್ಲಾ ದೇಶಗಳು ಲಸಿಕೆಯನ್ನು ಜನರಿಗೆ ನೀಡಿವೆ. ಆದರೆ ಭಾರತದಲ್ಲಿ ಜನಸಾಮಾನ್ಯರಿಗೆ 250 ರೂ ದರ ವಸೂಲಿ ಮಾಡಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಂಡು ಲಸಿಕೆ ಉಚಿತವಾಗಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹ ಮಾಡಿದ್ದಾರೆ. ಅಲ್ಲದೆ ಪಿಎಂ ಕೇರ್ ಫಂಡ್‌ ನ್ನು ಲಸಿಕೆಗೆ ಬಳಕೆ ಮಾಡಿ ಎಂದು ಒತ್ತಾಯಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp