ಶಿವಮೊಗ್ಗ: ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಅರೆಸ್ಟ್

ಪ್ರೋ ಕಬ್ಬಡಿ ಪಂದ್ಯಾವಳಿಯಲ್ಲಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಅವರ ಪುತ್ರ ಬಸವರಾಜ್ ನನ್ನ ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ.

Published: 06th March 2021 12:11 PM  |   Last Updated: 06th March 2021 04:25 PM   |  A+A-


Sangamesh son basavaraj

ಸಂಗಮೇಶ್ ಪುತ್ರ ಬಸವರಾಜ್

Posted By : Shilpa D
Source : Online Desk

ಶಿವಮೊಗ್ಗ: ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಅವರ ಪುತ್ರ ಬಿ ಎಸ್ ಬಸವೇಶ ಅವರನ್ನು ಓಲ್ಡ್‌ಟೌನ್‌ ಪೊಲೀಸರು ಬಂಧಿಸಿದ್ದಾರೆ.

ಫೆ.28ರಂದು ಭದ್ರಾವತಿಯಲ್ಲಿ ನಡೆದಿದ್ದ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯಗೊಂಡ ನಂತರ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಸೇರಿ ಐವರು ಗಾಯಗೊಂಡಿದ್ದರು. ಪ್ರಕರಣದಲ್ಲಿ ಬಸವೇಶ್ ಕೂಡ ಭಾಗಿಯಾಗಿದ್ದ ಎಂಬ ಆರೋಪವಿದೆ.

ಘಟನೆಗೆ ಸಂಬಂಧಿಸಿದಂತೆ ಸಂಗಮೇಶ್ವರ ಅವರ ಪುತ್ರ ಸೇರಿ ಇನ್ನು ಹಲವರ ವಿರುದ್ಧ ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರುಗಳು ದಾಖಲಾಗಿದ್ದವು. 

ಘಟನೆಯ ನಂತರ ಬಸವೇಶ ನಾಪತ್ತೆಯಾಗಿದ್ದನು. ಪ್ರಕರಣದ ಜಾಡು ಹಿಡಿದಿದ್ದ ಪೊಲೀಸರಿಗೆ ಬಸವೇಶ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಸತಿಗೃಹದಲ್ಲಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಆ ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿ ಕರೆತಂದಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp