ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿರುವ ಮಹಿಳೆ ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ: ದಿನೇಶ್ ಕಲ್ಲಹಳ್ಳಿ

ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

Published: 06th March 2021 10:41 AM  |   Last Updated: 06th March 2021 01:17 PM   |  A+A-


Dinesh Kallahalli

ದಿನೇಶ್ ಕಲ್ಲಹಳ್ಳಿ

Posted By : Shilpa D
Source : The New Indian Express

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗೆ ಭದ್ರತೆ ನೆಪವೊಡ್ಡಿ ಗುರುವಾರ ಗೈರಾಗಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ, ಶುಕ್ರವಾರ ಮಧ್ಯಾಹ್ನ ದಿಢೀರ್‌ ಆಗಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು.

ಕಬ್ಬನ್‌ ಪಾರ್ಕ್ ಠಾಣೆಗೆ ಬಂದ ದಿನೇಶ್, ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಡಿಸಿಪಿ ಅವರ ಎದುರು ವಿಚಾರಣೆ ಎದುರಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿದ್ಧಪಡಿಸಿಟ್ಟುಕೊಂಡಿದ್ದ ಪ್ರಶ್ನೆಗಳಿಗೆ ಉತ್ತರಿಸಿದರು.

ತಾವು ನೀಡಿರುವ ವಿಡಿಯೋ ಬಗ್ಗೆ ಹೆಚ್ಚಿನ ಮಾಹಿತಿ  ಕೊಡುವಂತೆ ತನಿಖಾದಿಕಾರಿಗಳು ಕೇಳಿದ್ದಾರೆ,  ಆದರೆ ಸೆಕ್ಸ್ ಟೇಪ್ ನಲ್ಲಿ ಭಾಗಿಯಾಗಿರುವ  ಮಹಿಳೆ ಸಚಿವರ ವಿರುದ್ಧ ದೂರು ನೀಡಲು ಮುಂದೆ ಬಂದಿಲ್ಲ, ಹೀಗಾಗಿ ಮಹಿಳೆ ಕುಟುಂಬದ ಪರ ನೀವು ದೂರು ನೀಡುವ ಉದ್ದೇಶದಿಂದ ಬಂದಿದ್ದೀರಾ ಎಂದು ಪೊಲೀಸರು ದಿನೇಶ್ ಕಲ್ಲಹಳ್ಳಿ ಅವರನ್ನು ಪ್ರಶ್ನಿಸಿದ್ದಾರೆ.

ವೀಡಿಯೊವನ್ನು ಪಡೆಯಲು ದಿನೇಶ್  ಕಲ್ಲಹಳ್ಳಿ ಅವರು, ಮಹಿಳೆಯ ಕುಟುಂಬ ಸದಸ್ಯರನ್ನು ಭೇಟಿಯಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದರು, ಮತ್ತು ಆ ವ್ಯಕ್ತಿಯೊಂದಿಗೆ ನಡೆಸಿದ 12 ನಿಮಿಷಗಳ ಸಂಭಾಷಣೆಯನ್ನು ಪರಿಶೀಲಿಸಿದ್ದಾರೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಎಫ್ ಐ ಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.  ಉದ್ದೇಶ ಪೂರ್ವಕವಾಗಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ, ವಿಡಿಯೋ ಆಧಾರದ ಸುಮೊಟು ಕೇಸ್  ದಾಖಲಿಸಲು ಪೊಲೀಸರು ಮುಂದಾಗುತ್ತಿಲ್ಲ, ನಾನು ಕೇಸ್ ದಾಖಲಿಸುವ ಮೊದಲೇ ವೆಬ್ ಸೈಟ್ ನಲ್ಲಿ ವಿಡಿಯೋ ಅಪ್ ಲೋಡ್ ಆಗಿತ್ತು ಎಂದಿ ತಿಳಿಸಿದ್ದಾರೆ.

ಮಹಿಳೆಯನ್ನು ಪತ್ತೆಹಚ್ಚುವುದು ಕಷ್ಟವೇನಲ್ಲ ಆದರೆ ಪ್ರಕರಣದ ತನಿಖೆ ನಡೆಸಲು ಪೊಲೀಸರು ಆಸಕ್ತಿ ಹೊಂದಿಲ್ಲ ಎಂದು ತಿಳಿಸಿದ್ದಾರೆ. ಅಶ್ಲೀಲ ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿಯನ್ನ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಯಾರು ಬ್ಲ್ಯಾಕ್​ಮೇಲ್ ಮಾಡ್ತಿದ್ದಾರೋ ಅವರನ್ನ ಬಂಧಿಸಲಿ ಎಂದು ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆ ಬಳಿ ಪ್ರತಿಕ್ರಿಯೆ ನೀಡಿದ್ದರು. 

ಇಂದು ತನಿಖೆಗೆ ಬೇಕಾದ ಪೂರಕ ದಾಖಲೆಗಳನ್ನು ನಾನು ಒದಗಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇನೆ. ನನಗೆ ಭದ್ರತೆ ನೀಡಿಲ್ಲವಾದರೂ ತನಿಖೆಗೆ ಸಹಕಾರವಾಗಲಿ ಎಂಬ ಕಾರಣಕ್ಕೆ ಬಂದಿದ್ದೇನೆ. ದೂರಿನಲ್ಲಿರುವ ಸತ್ಯಾಸತ್ಯತೆಯ ಬಗ್ಗೆ ತನಿಖೆ ಆಗಬೇಕು. ಈ ವಿಚಾರದಲ್ಲಿ ಯಾರೇ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದರೂ ಅವರನ್ನು ಬಂಧಿಸಬೇಕು ಎಂದು ತಿಳಿಸಿದ್ದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp