
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೋನಾದಿಂದ ಚೇತರಿಸಿಕೊಂಡಿದ್ದ 22 ವರ್ಷದ ಬಿ.ಟೆಕ್ ವಿದ್ಯಾರ್ಥಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರವಂತಿಕೆಪಾಳ್ಯ ನಿವಾಸಿಯಾದ ಸುನೀಲ್ ಕುಮಾರ್ ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಶುಕ್ರವಾರ ಸಂಜೆ 6 ಗಂಟೆಗೆ ಮನೆಯಿಂದ ತೆರಳಿದ್ದ ಸುನೀಲ್ ಕುಮಾರ್, ವಾಕಿಂಗ್ ಗೆ ಹೋಗುವುದಾಗಿ ತಾಯಿಗೆ ಹೇಳಿ ತೆರಳಿದ್ದಾನೆ.
ಒಂದು ತಿಂಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು, ನಾಲ್ಕು ದಿನ ಕೋಮಾದಲ್ಲಿದ್ದ, ಆಸ್ಪತ್ರೆಯಿಂದ ಮರಳಿದ ನಂತರ ಖಿನ್ನತೆಗೊಳಗಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.