ಕೋವಿಡ್-19: ನಾಳೆಯಿಂದ ರಾಜ್ಯದೆಲ್ಲೆಡೆ  3000 ಕೇಂದ್ರಗಳಲ್ಲಿ ಲಸಿಕೆ

ರಾಜ್ಯದಲ್ಲಿ ಸೋಮವಾರದಿಂದ ಮೂರು ಸಾವಿರ ಲಸಿಕಾ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ.

Published: 07th March 2021 07:52 AM  |   Last Updated: 07th March 2021 07:52 AM   |  A+A-


sudhakar

ಸಚಿವ ಸುಧಾಕರ್

Posted By : Manjula VN
Source : The New Indian Express

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಮೂರು ಸಾವಿರ ಲಸಿಕಾ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದಿನಕ್ಕೆ ಒಂದರಿಂದ ಒಂದೂವರೆ ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಇಟ್ಟುಕೊಂಡಿದ್ದೇವೆ. ನಾವು ಈ ಗುರಿ ತಲುಪಲು ಸಾಧ್ಯವಾದರೆ, ಅವರತ್ತು ದಿನಗಳಲ್ಲಿ ದೇಶದಲ್ಲೇ ಅತೀ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಹೇಳಿದರು.

ಲಸಿಕೆ ಅಭಿಯಾನವನ್ನು ಎಲ್ಲಾ ಜಿಲ್ಲೆಗಳ ಪ್ರಾಥಮಿಕ ನಗರ, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆರೋಗ್ಯ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp