ಪೆಟ್ರೋಲಿಯಂ ಜಿಎಸ್ ಟಿಗೆ ಸೇರಿಸುವ ಹುನ್ನಾರ; ಹೆಚ್.ಡಿ.ಕುಮಾರಸ್ವಾಮಿ ಆರೋಪ

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?...

Published: 07th March 2021 11:43 AM  |   Last Updated: 07th March 2021 11:43 AM   |  A+A-


HD kumaraswamy

ಹೆಚ್.ಡಿ.ಕುಮಾರಸ್ವಾಮಿ

Posted By : Manjula VN
Source : UNI

ಬೆಂಗಳೂರು: ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರಾಜ್ಯಗಳು ಜಿಎಸ್ ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp