ಸಮಾನ ಶ್ರೇಣಿಗೆ ಸಮಾನ ಪಿಂಚಣಿ: ರಕ್ಷಣಾ ಮತ್ತು ಹಣಕಾಸು ಸಚಿವಾಲಯಕ್ಕೆ ಹೈಕೋರ್ಟ್ ನೊಟೀಸ್

ಸಮಾನ ಶ್ರೇಣಿಗೆ ಸಮಾನ ಪಿಂಚಣಿ (ಒಆರ್‌ಒಪಿ) ಯೋಜನೆಯನ್ನು ಏಕ ಸದಸ್ಯ ನ್ಯಾಯಾಂಗ ಸಮಿತಿಯ ಶಿಫಾರಸಿನ ಪ್ರಕಾರ ಮರು ನಿಗದಿ ಮಾಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

Published: 07th March 2021 09:04 AM  |   Last Updated: 07th March 2021 09:04 AM   |  A+A-


High court

ಹೈಕೋರ್ಟ್

Posted By : Shilpa D
Source : The New Indian Express

ಬೆಂಗಳೂರು: ಸಮಾನ ಶ್ರೇಣಿಗೆ ಸಮಾನ ಪಿಂಚಣಿ (ಒಆರ್‌ಒಪಿ) ಯೋಜನೆಯನ್ನು ಏಕ ಸದಸ್ಯ ನ್ಯಾಯಾಂಗ ಸಮಿತಿಯ ಶಿಫಾರಸಿನ ಪ್ರಕಾರ ಮರು ನಿಗದಿ ಮಾಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. 

ಓನ್ ರ್ಯಾಂಕ್ , ಒನ್ ಪೆನ್ಷನ್ ಯೋಜನೆ ಸಂಬಂಧ ಕೇಂದ್ರ ಸರ್ಕಾರ, ರಕ್ಷಣಾ ಸಚಿವಾಲಯ ಮತ್ತು ಹಣಕಾಸು ಸಚಿವಾಲಯಕ್ಕೆ ನೋಟಿಸ್ ನೀಡಲು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ಮಾಜಿ ಸೈನಿಕರಿಗೆ 2019 ರ ಜುಲೈ 1 ರಿಂದ ಜಾರಿಗೆ ಬರುವಂತೆ ಒಆರ್‌ಒಪಿ ರೀ ಫಿಕ್ಸ್ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ, ಸಚಿವಾಲಯಗಳಿಗೆ ನಿರ್ದೇಶನಗಳನ್ನು ನೀಡಬೇಕು ಮತ್ತು ತಕ್ಷಣದ ಜಾರಿಗೆ ಬರುವಂತೆ ಬಾಕಿ ಹಣವನ್ನು ವಿತರಿಸಬೇಕೆಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ

ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿ ನಿವೃತ್ತಿ ಹೊಂದಿರುವ ಜಿ.ಬಿ. ಅತ್ರಿ ಅರ್ಜಿ ಸಲ್ಲಿಸಿದ್ದು, ‘ಯೋಜನೆ ಮಾರ್ಪಡಿಸದೇ ಇದ್ದರೆ 20 ಲಕ್ಷ ಮಾಜಿ ಸೈನಿಕರು ಮತ್ತು 4 ಲಕ್ಷಕ್ಕೂ ಹೆಚ್ಚು ವಿಧವೆಯರಿಗೆ ಅನ್ಯಾಯವಾಗಲಿದೆ’ ಎಂದು ತಿಳಿಸಿದ್ದಾರೆ.

ಒಆರ್‌ಒಪಿ ಎನ್ನುವುದು ಅವರ ನಿವೃತ್ತಿಯ ದಿನಾಂಕ ಲೆಕ್ಕಿಸದೆ, ಅದೇ ಶ್ರೇಣಿಯಲ್ಲಿ ನಿವೃತ್ತಿ ಹೊಂದಿದ ರಕ್ಷಣಾ ಸಿಬ್ಬಂದಿಗೆ ಪಾವತಿಸುವ ಏಕರೂಪದ ಪಿಂಚಣಿ. 2014ರಿಂದ ಜಾರಿಗೆ ತರಲಾಗಿದ್ದು, ಆ ಆದೇಶದ ಪ್ರಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಮರು ನಿಗದಿ ಮಾಡಬೇಕು. 2019ರ ಜೂನ್‌ 30ಕ್ಕೆ 5 ವರ್ಷಗಳ ಅವಧಿ ಪೂರ್ಣಗೊಂಡಿದೆ. ಸಮಿತಿಯಿಂದ ವರದಿ ಪಡೆದಿದ್ದರೂ ಈವರೆಗೆ ಮರು ನಿಗದಿ ಮಾಡಿಲ್ಲ’ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp