ದೇಶದಲ್ಲಿ ಅತೀ ಹೆಚ್ಚು ಕೊರೋನಾ ಸೋಂಕಿತರು ಹೊಂದಿರುವ 5 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದು...!

ಭಾರತದಲ್ಲಿ ಕೊರೋನಾ ಮಾಹಾಮಾರಿ ಆರ್ಭಟ ದಿನಕಳೆಯುತ್ತಿದ್ದಂತೆಯ ಮತ್ತೆ ಹೆಚ್ಚಾಗತೊಡಗಿದೆ. ದೇಶದ ಅತೀ ಹೆಚ್ಚು ಕೊರೋನಾ ಸೋಂಕಿತರು ಹೊಂದಿರುವ 5 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದ್ದು, ಈ ಬೆಳವಣಿಗೆಯು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

Published: 07th March 2021 08:13 AM  |   Last Updated: 07th March 2021 08:13 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಭಾರತದಲ್ಲಿ ಕೊರೋನಾ ಮಾಹಾಮಾರಿ ಆರ್ಭಟ ದಿನಕಳೆಯುತ್ತಿದ್ದಂತೆಯ ಮತ್ತೆ ಹೆಚ್ಚಾಗತೊಡಗಿದೆ. ದೇಶದ ಅತೀ ಹೆಚ್ಚು ಕೊರೋನಾ ಸೋಂಕಿತರು ಹೊಂದಿರುವ 5 ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದ್ದು, ಈ ಬೆಳವಣಿಗೆಯು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

 

ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ತಮಿಳುನಾಡು, ಕರ್ನಾಟಕದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, ದೇಶದ ಒಟ್ಟಾರೆ ಸೋಂಕಿತರ ಪೈಕಿ ಕೇವಲ 5 ರಾಜ್ಯಗಳಲ್ಲಿ ಶೇ.82ರಷ್ಟು ಸೋಂಕಿತರು ಇದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ.

ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ 5 ರಾಜ್ಯಗಳ ಪೈಕಿ ಶನಿವಾರ ಪತ್ತೆಯಾದ 677 ಹೊಸ ಸೋಂಕಿತರ ಪೈಕಿ ಕರ್ನಾಟಕ ರಾಜ್ಯ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಮೊದಲನಂತೆ ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಟೆಸ್ಟ್-ಟ್ರ್ಯಾಕ್-ಟ್ರೀಟ್ ನಿಯಮ ಪಾಲನೆಯನ್ನು ತ್ವರಿತಗತಿಯಲ್ಲಿ ಜಾರಿಗೆ ತರಬೇಕು. ಅಲ್ಲದೆ, ಸಾರಿ ಹಾಗೂ ಐಎಲ್ಐ ಪ್ರಕರಣಗಳನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗುವ ಎಲ್ಲಾ ಬೆಳವಣಗೆಗಳು ಕಂಡು ಬರುತ್ತಿವೆ. ಸಾಂಕ್ರಾಮಿಕ ರೋಗ ಮುಗಿಯಿತೆಂದು ಜನರು ತಿಳಿಯಬಾರದು. ಕೇಂದ್ರ ಆರೋಗ್ಯ ಸಚಿವಾಲಯದ ತಜ್ಞರು ಹಾಗೂ ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಮಾಹಿತಿಯಂತೆ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದರಲ್ಲಿ ಕರ್ನಾಟಕ ರಾಜ್ಯ ಕೂಡ ಒಂದಾಗಿದೆ. ಈ ಬೆಳವಣಿಗೆಗಳು ಕೊರೋನಾ ಎರಡನೇ ಅಲೆ ಆರಂಭವಾಗುವ ಸೂಚನೆಗಳನ್ನು ನೀಡುತ್ತಿದೆ. ಹೀಗಾಗಿ ನಾವು ಈ ಹಿಂದಿನ ಟೆಸ್ಟ್-ಟ್ರ್ಯಾಕ್-ಟ್ರೀಟ್ ಫಾರ್ಮುಲಾವನ್ನು ಪಾಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp