ಕುಂದಾಪುರ: ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ವ್ಯಕ್ತಿ ನೇಣಿಗೆ ಶರಣು

ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Published: 07th March 2021 07:42 PM  |   Last Updated: 07th March 2021 07:42 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ಕುಂದಾಪುರ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತನನ್ನು ತೆಕ್ಕಟ್ಟೆ ಬರಲಿಬೆಟ್ಟುನಿವಾಸಿ ಚಂದ್ರ ಪೂಜಾರಿ (35) ಎಂದು ಗುರುತಿಸಲಾಗಿದೆ.

ಚಂದ್ರ ಪೂಜಾರಿ ಕಟ್ಟಡ ನಿರ್ಮಾಣ ಕಾಮಗಾರಿಯ ಸೆಂಟ್ರಿಂಗ್ ಕೆಲಸದಲ್ಲಿ ನಿರತವಾಗಿದ್ದನು. ಅವರು ಪ್ರತಿದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು

ಚಂದ್ರ ಪೂಜಾರಿ ಖಿನ್ನತೆಯಿಂದ ಬಳಲುತ್ತಿದ್ದರೆಂದು ಸ್ಥಳೀಯರು ಹೇಳಿದ್ದಾರೆ.ಇನ್ನು ಚಂದ್ರ ಪೂಜಾರಿ ನೇಣು ಹಾಕಿಕೊಳ್ಳಲು ದೇವಾಲಯದ ಬಾವಿಯ ಹಗ್ಗವನ್ನು ಬಳಸಿದ್ದರು.ದೇವಾಲಯ ಕಸ ಗುಡಿಸುವವರು ಭಾನುವಾರ ಬೆಳಿಗ್ಗೆ ಕಂಡಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.

ಚಂದ್ರ ಪೂಜಾರಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿತ್ತು.ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp