ವಿಶ್ವ ಮಹಿಳಾ ದಿನಾಚರಣೆ: ಮಹಿಳಾ ಕೊರೋನಾ ವಾರಿಯರ್ ಗಳಿಗೆ ಉಚಿತ ಪ್ರವಾಸ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಮಹಿಳಾ ಕೊರೊನಾ ವಾರಿಯರ್ ಗಳಿಗೆ ಉಚಿತ ಪ್ರವಾಸ ಆಯೋಜಿಸಲಾಗಿದ್ದು, ಬೇಲೂರು-ಹಳೇಬೀಡು ಹಾಗೂ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ಮಹಿಳೆಯರನ್ನ ಕರೆದೊಯ್ಯಲಾಗಿದೆ.

Published: 08th March 2021 11:30 AM  |   Last Updated: 08th March 2021 01:07 PM   |  A+A-


ಪ್ರವಾಸಕ್ಕೆ ತೆರಳುತ್ತಿರುವ ಮಹಿಳೆಯರೊಂದಿಗೆ ನಟಿ ಶ್ರುತಿ ಹಾಗೂ ಸಚಿವ ಯೋಗೇಶ್ವರ್

Posted By : Manjula VN
Source : UNI

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಮಹಿಳಾ ಕೊರೊನಾ ವಾರಿಯರ್ ಗಳಿಗೆ ಉಚಿತ ಪ್ರವಾಸ ಆಯೋಜಿಸಲಾಗಿದ್ದು, ಬೇಲೂರು -ಹಳೇಬೀಡು ಹಾಗೂ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ಮಹಿಳೆಯರನ್ನ ಕರೆದೊಯ್ಯಲಾಗಿದೆ. 

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರೋನಾ ವಾರಿಯರ್ಸ್ ಹಾಗೂ ಕೆಎಸ್ ಟಿಡಿಸಿ ಮಹಿಳಾ ಸಿಬ್ಬಂದಿ ಒಟ್ಟು 80 ಮಂದಿ ಎರಡು ದಿನಗಳ ಪ್ರವಾಸಕ್ಕಾಗಿ ಬೆಂಗಳೂರಿನ ಕುಮಾರಕೃಪಾ ದಿಂದ ತೆರಳಿದರು.

ಪ್ರವಾಸೋದ್ಯಮ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ ಪಿ ಯೋಗೇಶ್ವರ್ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ. ಎರಡು ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.ಮೊದಲಿಗೆ ಬೇಲೂರು -ಹಳೇಬೀಡು ವೀಕ್ಷಿಸಿ ಬಳಿಕ ರಾತ್ರಿ ಯಗಚಿ ಜಲಾಶಯದಲ್ಲಿ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯ ದರ್ಶನ ಮಾಡಿಕೊಂಡು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ್ ಅವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಕೊರೋನೋ ವಾರಿಯರ್ಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಮಹಿಳಾ ಸಿಬ್ಬಂದಿಗೆ ಪ್ರೋತ್ಸಾಹ ನೀಡಲು ಎರಡು ದಿನಗಳ ಪ್ರವಾಸ ಏರ್ಪಡಿಸಲಾಗಿದೆ .ಒಂದು ತಿಂಗಳ ಕಾಲ ಪ್ರವಾಸೋದ್ಯಮ ಇಲಾಖೆಯ ಹೋಟೆಲ್ ಗಳಲ್ಲಿ ಮಹಿಳೆಯರಿಗೆ ವಿಶೇಷ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ ಎಂದು ಹೇಳಿದರು.

ನಿಗಮದ ಅಧ್ಯಕ್ಷೆ ಶೃತಿ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶುಶ್ರೂಕಿಯರು ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಅವರುಗಳನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಹೀಗಾಗಿ ಮುಂಚೂಣಿಯಲ್ಲಿದ್ದ ಕೋರೋನಾ ವಾರಿಯರ್ಸ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಮಹಿಳಾ ಸಿಬ್ಬಂದಿಗೆ ಎರಡು ದಿನಗಳ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ತಮ್ಮ ಇಲಾಖೆಯಿಂದ ಮತ್ತಷ್ಟು ಉತ್ತೇಜನ ನೀಡುವುದಾಗಿ ತಿಳಿಸಿದರು.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp