ಡೆತ್ ನೋಟ್ ಬರೆದು ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ರಾತ್ರಿ ನಡೆದಿದೆ.

Published: 10th March 2021 02:06 PM  |   Last Updated: 10th March 2021 02:12 PM   |  A+A-


Employee commits suicide

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ರಾತ್ರಿ ನಡೆದಿದೆ.

ಕಂಪನಿಯಲ್ಲಿ ಯಾರು ಇಲ್ಲದ ವೇಳೆ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀವ್ರ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್​ ಗೆ ತಾವು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ವೇತನ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಮೂಲತಃ ಹಿರಿಯೂರಿನವರಾದ ಶಾಂತಕುಮಾರ್, ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp